Matthew · chapter 5 · verse 32
Matthew 5:32 in Kannada
ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
Aadare naanu nimage heluvadenandare--haadarada kaarana dindallade tanna hendatiyannu bittubiduvavanu aakeyu vyabhichaara maaduvante kaarananaaguvanu; mattu bidalpattavalannu yaavanaadaroo maduve yaadare avanu vyabhichaara maaduvavanaagiddaane.
Matthew 5:32 in English
- King James Version (KJV)
- But I say unto you, That whosoever shall put away his wife, saving for the cause of fornication, causeth her to commit adultery: and whosoever shall marry her that is divorced committeth adultery.
- World English Bible (WEB)
- but I tell you that whoever puts away his wife, except for the cause of sexual immorality, makes her an adulteress; and whoever marries her when she is put away commits adultery.
- American Standard Version (ASV)
- but I say unto you, that every one that putteth away his wife, saving for the cause of fornication, maketh her an adulteress: and whosoever shall marry her when she is put away committeth adultery.
- Bible in Basic English (BBE)
- But I say to you that everyone who puts away his wife for any other cause but the loss of her virtue, makes her false to her husband; and whoever takes her as his wife after she is put away, is no true husband to her.
- Darby Translation (DBY)
- But I say unto you, that whosoever shall put away his wife, except for cause of fornication, makes her commit adultery, and whosoever marries one that is put away commits adultery.
- Webster's Bible (WBS)
- But I say to you, That whoever shall put away his wife, saving for the cause of lewdness, causeth her to commit adultery: and whoever shall marry her that is divorced, committeth adultery.
- Young's Literal Translation (YLT)
- but I — I say to you, that whoever may put away his wife, save for the matter of whoredom, doth make her to commit adultery; and whoever may marry her who hath been put away doth commit adultery.
Read in context
- 30ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- 31ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
- 32ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
- 33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
- 34ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
Cross references
- Romans 7:3 ರೋಮಾಪುರದವರಿಗೆ 7:3ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
- Luke 16:18 ಲೂಕನು 16:18ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
- 1 Corinthians 7:10–11 1 ಕೊರಿಂಥದವರಿಗೆ 7:10–11ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
- 1 Corinthians 7:4 1 ಕೊರಿಂಥದವರಿಗೆ 7:4ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
- Matthew 19:8–9 ಮತ್ತಾಯನು 19:8–9ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು. ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- Mark 10:5–12 ಮಾರ್ಕನು 10:5–12ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು. ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು. ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು. ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು. ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ. ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
- Malachi 2:14–16 ಮಲಾಕಿಯ 2:14–16ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ, ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Matthew 5:28 ಮತ್ತಾಯನು 5:28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.