Matthew · chapter 5 · verse 43
Matthew 5:43 in Kannada
ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
Neenu ninna nereyavanannu preetisi ninna vairiyannu hagemaadabeku endu heliru vadannu neevu keliddeeri.
Matthew 5:43 in English
- King James Version (KJV)
- Ye have heard that it hath been said, Thou shalt love thy neighbour, and hate thine enemy.
- World English Bible (WEB)
- “You have heard that it was said, ‘You shall love your neighbor and hate your enemy.’
- American Standard Version (ASV)
- Ye have heard that it was said, Thou shalt love thy neighbor, and hate thine enemy:
- Bible in Basic English (BBE)
- You have knowledge that it was said, Have love for your neighbour, and hate for him who is against you:
- Darby Translation (DBY)
- Ye have heard that it has been said, Thou shalt love thy neighbour and hate thine enemy.
- Webster's Bible (WBS)
- Ye have heard that it hath been said, Thou shalt love thy neighbor, and hate thy enemy:
- Young's Literal Translation (YLT)
- 'Ye heard that it was said: Thou shalt love thy neighbour, and shalt hate thine enemy;
Read in context
- 41ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.
- 42ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
- 43ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
- 44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- 45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
Cross references
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Psalm 139:21–22 ಕೀರ್ತನೆಗಳು 139:21–22ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ? ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
- Galatians 5:13–14 ಗಲಾತ್ಯದವರಿಗೆ 5:13–14ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Matthew 19:19 ಮತ್ತಾಯನು 19:19ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
- Romans 13:8–10 ರೋಮಾಪುರದವರಿಗೆ 13:8–10ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- Deuteronomy 23:6 ಧರ್ಮೋಪದೇಶಕಾಂಡ 23:6ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
- James 2:8 ಯಾಕೋಬನು 2:8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
- Mark 12:31–34 ಮಾರ್ಕನು 12:31–34ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- Matthew 22:39–40 ಮತ್ತಾಯನು 22:39–40ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು. ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
- Luke 10:27–29 ಲೂಕನು 10:27–29ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು. ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
- Psalm 41:10 ಕೀರ್ತನೆಗಳು 41:10ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
- Exodus 17:14–16 ವಿಮೋಚನಕಾಂಡ 17:14–16ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು. ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು. ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.