Matthew · chapter 5 · verse 46
Matthew 5:46 in Kannada
ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
Nimmannu preetimaaduvavaranne neevu preetimaadidare nimage yaava pratiphala sikkeetu? Sunkadavaroo haage maaduttaarallave?
Matthew 5:46 in English
- King James Version (KJV)
- For if ye love them which love you, what reward have ye? do not even the publicans the same?
- World English Bible (WEB)
- For if you love those who love you, what reward do you have? Don’t even the tax collectors do the same?
- American Standard Version (ASV)
- For if ye love them that love you, what reward have ye? do not even the publicans the same?
- Bible in Basic English (BBE)
- For if you have love for those who have love for you, what credit is it to you? do not the tax-farmers the same?
- Darby Translation (DBY)
- For if ye should love those who love you, what reward have ye? Do not also the tax-gatherers the same?
- Webster's Bible (WBS)
- For if ye love them who love you, what reward have ye? do not even the publicans the same?
- Young's Literal Translation (YLT)
- 'For, if ye may love those loving you, what reward have ye? do not also the tax-gatherers the same?
Read in context
- 44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- 45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- 46ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
- 47ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- 48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
Cross references
- Luke 6:32–35 ಲೂಕನು 6:32–35ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ. ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ. ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ. ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- 1 Peter 2:20–23 1 ಪೇತ್ರನು 2:20–23ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Matthew 11:19 ಮತ್ತಾಯನು 11:19ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
- Matthew 9:10–11 ಮತ್ತಾಯನು 9:10–11ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು. ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
- Luke 18:13 ಲೂಕನು 18:13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- Matthew 18:17 ಮತ್ತಾಯನು 18:17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- Luke 15:1 ಲೂಕನು 15:1ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
- Matthew 6:1 ಮತ್ತಾಯನು 6:1ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
- Luke 19:2 ಲೂಕನು 19:2ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
- Luke 19:7 ಲೂಕನು 19:7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
- Matthew 21:31–32 ಮತ್ತಾಯನು 21:31–32ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.