Matthew · chapter 6 · verse 24
Matthew 6:24 in Kannada
ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
Yaava manushyanoo ibbaru yajamaanarige seve maadalaaranu; yaakandare avanu obbanannu hagemaadi innobbanannu preetimaaduvanu; illavaadare obbanannu hondikondu mattobba nannu asadde maaduvanu. Neevu devarannoo dhanavannoo sevisalaariri.
Matthew 6:24 in English
- King James Version (KJV)
- No man can serve two masters: for either he will hate the one, and love the other; or else he will hold to the one, and despise the other. Ye cannot serve God and mammon.
- World English Bible (WEB)
- “No one can serve two masters, for either he will hate the one and love the other, or else he will be devoted to one and despise the other. You can’t serve both God and Mammon.
- American Standard Version (ASV)
- No man can serve two masters: for either he will hate the one, and love the other; or else he will hold to one, and despise the other. Ye cannot serve God and mammon.
- Bible in Basic English (BBE)
- No man is able to be a servant to two masters: for he will have hate for the one and love for the other, or he will keep to one and have no respect for the other. You may not be servants of God and of wealth.
- Darby Translation (DBY)
- No one can serve two masters; for either he will hate the one and will love the other, or he will hold to the one and despise the other. Ye cannot serve God and mammon.
- Webster's Bible (WBS)
- No man can serve two masters: for either he will hate the one, and love the other; or else he will hold to the one, and despise the other. Ye cannot serve God and mammon.
- Young's Literal Translation (YLT)
- 'None is able to serve two lords, for either he will hate the one and love the other, or he will hold to the one, and despise the other; ye are not able to serve God and Mammon.
Read in context
- 22ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
- 23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
- 24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- 25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
- 26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
Cross references
- 1 John 2:15–16 1 ಯೋಹಾನನು 2:15–16ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Luke 16:13 ಲೂಕನು 16:13ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Romans 6:16–22 ರೋಮಾಪುರದವರಿಗೆ 6:16–22ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ. ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ. ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ. ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ. ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ. ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Luke 16:11 ಲೂಕನು 16:11ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- Joshua 24:19–20 ಯೆಹೋಶುವ 24:19–20ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ