Matthew · chapter 7 · verse 17
Matthew 7:17 in Kannada
ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
Adaranteye prati yondu olle maravu olle phalavannu koduttade; mattu ketta maravu ketta phalavannu koduttade;
Matthew 7:17 in English
- King James Version (KJV)
- Even so every good tree bringeth forth good fruit; but a corrupt tree bringeth forth evil fruit.
- World English Bible (WEB)
- Even so, every good tree produces good fruit, but the corrupt tree produces evil fruit.
- American Standard Version (ASV)
- Even so every good tree bringeth forth good fruit; but the corrupt tree bringeth forth evil fruit.
- Bible in Basic English (BBE)
- Even so, every good tree gives good fruit; but the bad tree gives evil fruit.
- Darby Translation (DBY)
- So every good tree produces good fruits, but the worthless tree produces bad fruits.
- Webster's Bible (WBS)
- Even so every good tree bringeth forth good fruit; but a corrupt tree bringeth forth evil fruit.
- Young's Literal Translation (YLT)
- so every good tree doth yield good fruits, but the bad tree doth yield evil fruits.
Read in context
- 15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- 16ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
- 17ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
- 18ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
- 19ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
Cross references
- Matthew 12:33–35 ಮತ್ತಾಯನು 12:33–35ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು. ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- Galatians 5:22–24 ಗಲಾತ್ಯದವರಿಗೆ 5:22–24ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- Ephesians 5:9 ಎಫೆಸದವರಿಗೆ 5:9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Psalm 92:13–14 ಕೀರ್ತನೆಗಳು 92:13–14ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- Jeremiah 17:8 ಯೆರೆಮೀಯ 17:8ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Luke 13:6–9 ಲೂಕನು 13:6–9ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ. ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು. ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು; ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
- James 3:17–18 ಯಾಕೋಬನು 3:17–18ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Jeremiah 11:19 ಯೆರೆಮೀಯ 11:19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.