Matthew · chapter 7 · verse 19
Matthew 7:19 in Kannada
ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
Olle phalavannu kodada pratiyondu maravu kadiyalpattu benkiyalli haakalpaduttade.
Matthew 7:19 in English
- King James Version (KJV)
- Every tree that bringeth not forth good fruit is hewn down, and cast into the fire.
- World English Bible (WEB)
- Every tree that doesn’t grow good fruit is cut down and thrown into the fire.
- American Standard Version (ASV)
- Every tree that bringeth not forth good fruit is hewn down, and cast into the fire.
- Bible in Basic English (BBE)
- Every tree which does not give good fruit is cut down and put in the fire.
- Darby Translation (DBY)
- Every tree not producing good fruit is cut down and cast into the fire.
- Webster's Bible (WBS)
- Every tree that bringeth not forth good fruit is hewn down, and cast into the fire.
- Young's Literal Translation (YLT)
- Every tree not yielding good fruit is cut down and is cast to fire:
Read in context
- 17ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
- 18ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
- 19ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
- 20ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
- 21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
Cross references
- Matthew 3:10 ಮತ್ತಾಯನು 3:10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- John 15:2–6 ಯೋಹಾನನು 15:2–6ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Luke 3:9 ಲೂಕನು 3:9ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
- Hebrews 6:8 ಇಬ್ರಿಯರಿಗೆ 6:8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Luke 13:6–9 ಲೂಕನು 13:6–9ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ. ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು. ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು; ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- Isaiah 5:5–7 ಯೆಶಾಯ 5:5–7ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Ezekiel 15:2–7 ಯೆಹೆಜ್ಕೇಲನು 15:2–7ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು? ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Matthew 21:19–20 ಮತ್ತಾಯನು 21:19–20ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು. ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.