Matthew · chapter 7 · verse 27
Matthew 7:27 in Kannada
ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
Hegandare maleyu suridu pravaahagalu bandu gaaliyu beesi aa manege badidavu; aaga adu bittu; mattu adara beeluvikeyu doddadaagittu.
Matthew 7:27 in English
- King James Version (KJV)
- And the rain descended, and the floods came, and the winds blew, and beat upon that house; and it fell: and great was the fall of it.
- World English Bible (WEB)
- The rain came down, the floods came, and the winds blew and beat on that house; and it fell—and its fall was great.”
- American Standard Version (ASV)
- and the rain descended, and the floods came, and the winds blew, and smote upon that house; and it fell: and great was the fall thereof.
- Bible in Basic English (BBE)
- And the rain came down and there was a rush of waters and the winds were driving against that house; and it came down and great was its fall.
- Darby Translation (DBY)
- and the rain came down, and the streams came, and the winds blew and beat upon that house, and it fell, and its fall was great.
- Webster's Bible (WBS)
- And the rain descended, and the floods came, and the winds blew, and beat upon that house; and it fell, and great was the fall of it.
- Young's Literal Translation (YLT)
- and the rain did descend, and the streams came, and the winds blew, and they beat on that house, and it fell, and its fall was great.'
Read in context
- 25ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
- 26ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
- 27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- 28ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- 29ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
Cross references
- 1 Corinthians 3:13 1 ಕೊರಿಂಥದವರಿಗೆ 3:13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- Matthew 13:19–22 ಮತ್ತಾಯನು 13:19–22ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ. ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ; ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು. ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
- 2 Peter 2:20–22 2 ಪೇತ್ರನು 2:20–22ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Hebrews 10:26–31 ಇಬ್ರಿಯರಿಗೆ 10:26–31ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ. ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ. ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- Matthew 12:43–45 ಮತ್ತಾಯನು 12:43–45ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ. ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು. ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
- Ezekiel 13:10–16 ಯೆಹೆಜ್ಕೇಲನು 13:10–16ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.