Matthew · chapter 7 · verse 5
Matthew 7:5 in Kannada
ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
Kapati neenu, modalu ninna svanta kanninolagiruva tole yannu tegedu haaku; aaga ninna sahodarana kanninolagiruva raveyannu tegedu haakuvadakke ninage chennaagi kaanisuvadu.
Matthew 7:5 in English
- King James Version (KJV)
- Thou hypocrite, first cast out the beam out of thine own eye; and then shalt thou see clearly to cast out the mote out of thy brother’s eye.
- World English Bible (WEB)
- You hypocrite! First remove the beam out of your own eye, and then you can see clearly to remove the speck out of your brother’s eye.
- American Standard Version (ASV)
- Thou hypocrite, cast out first the beam out of thine own eye; and then shalt thou see clearly to cast out the mote out of thy brother’s eye.
- Bible in Basic English (BBE)
- You false one, first take out the bit of wood from your eye, then will you see clearly to take out the grain of dust from your brother's eye.
- Darby Translation (DBY)
- Hypocrite, cast out first the beam out of thine eye, and then thou wilt see clearly to cast out the mote out of the eye of thy brother.
- Webster's Bible (WBS)
- Thou hypocrite, first cast out the beam out of thy own eye; and then shalt thou see clearly to cast out the mote out of thy brother's eye.
- Young's Literal Translation (YLT)
- Hypocrite, cast out first the beam out of thine own eye, and then thou shalt see clearly to cast out the mote out of thy brother's eye.
Read in context
- 3ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
- 4ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
- 5ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
- 6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- 7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
Cross references
- Luke 6:42 ಲೂಕನು 6:42ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
- Psalm 51:9–13 ಕೀರ್ತನೆಗಳು 51:9–13ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು. ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು. ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ. ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು. ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
- Matthew 23:13–28 ಮತ್ತಾಯನು 23:13–28ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ. ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
- Luke 13:15 ಲೂಕನು 13:15ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
- Luke 4:23 ಲೂಕನು 4:23ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
- Matthew 22:18 ಮತ್ತಾಯನು 22:18ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
- Luke 12:56 ಲೂಕನು 12:56ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?