Matthew · chapter 8 · verse 4
Matthew 8:4 in Kannada
ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
Yesu avanige--neenu yaarigoo helabeda nodu; horatuhogi yaajakanige ninnannu torisikondu avarige saakshiyaagiruvante mosheyu aajnyaapisida kaanikeyannu arpisu endu helidanu.
Matthew 8:4 in English
- King James Version (KJV)
- And Jesus saith unto him, See thou tell no man; but go thy way, shew thyself to the priest, and offer the gift that Moses commanded, for a testimony unto them.
- World English Bible (WEB)
- Jesus said to him, “See that you tell nobody; but go, show yourself to the priest, and offer the gift that Moses commanded, as a testimony to them.”
- American Standard Version (ASV)
- And Jesus saith unto him, See thou tell no man; but go, show thyself to the priest, and offer the gift that Moses commanded, for a testimony unto them.
- Bible in Basic English (BBE)
- And Jesus said to him, See that you say nothing about this to anyone; but go and let the priest see you and make the offering which was ordered by Moses, for a witness to them.
- Darby Translation (DBY)
- And Jesus says to him, See thou tell no man, but go, shew thyself to the priest, and offer the gift which Moses ordained, for a testimony to them.
- Webster's Bible (WBS)
- And Jesus saith to him, See thou tell no man; but go, show thyself to the priest, and offer the gift that Moses commanded, for a testimony to them.
- Young's Literal Translation (YLT)
- And Jesus saith to him, 'See, thou mayest tell no one, but go, thyself shew to the priest, and bring the gift that Moses commanded for a testimony to them.'
Read in context
- 2ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
- 3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
- 4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- 5ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
- 6ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.
Cross references
- Leviticus 14:2–32 ಯಾಜಕಕಾಂಡ 14:2–32ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು. ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು. ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು. ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು. ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು. ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು. ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು. ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು. ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು. ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು. ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು. ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು. ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು. ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು. ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು. ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು. ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು. ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು. ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು. ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು. ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು. ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು. ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು. ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು. ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
- Luke 17:14 ಲೂಕನು 17:14ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
- Luke 5:14 ಲೂಕನು 5:14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- Leviticus 13:2–46 ಯಾಜಕಕಾಂಡ 13:2–46ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು. ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು. ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು. ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು. ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು. ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು. ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು. ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು. ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು. ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು. ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ. ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು. ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ. ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು. ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು. ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು. ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ. ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ. ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು. ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ. ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು. ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ. ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು. ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು. ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ. ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು. ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು. ತನ್ನ ಮುಂದಲೆಯ ಕೂದಲು ಉದುರಿಹೋಗಿದ್ದರೂ ಅವನು ಪಟ್ಟೆತಲೆಯವನಾ ದರೂ ಶುದ್ಧನೇ. ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ. ಆಗ ಯಾಜಕನು ಅವನನ್ನು ನೋಡಬೇಕು ಇಗೋ, ಅವನ ಬೋಳು ತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಏಳುತ್ತಿರುವ ಆ ಮಚ್ಚೆಯು ಬಿಳುಪಾಗಿ ಕೆಂಪಾಗಿದ್ದರೆ ಶರೀರದ ಚರ್ಮ ದಲ್ಲಿ ಇರುವ ಕುಷ್ಠದ ಹಾಗಿದ್ದರೆ ಕುಷ್ಠರೋಗಿ ಎಂದೂ ಅಶುದ್ಧನೆಂದೂ ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು. ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು. ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- Mark 7:36 ಮಾರ್ಕನು 7:36ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Mark 6:11 ಮಾರ್ಕನು 6:11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
- Matthew 9:30 ಮತ್ತಾಯನು 9:30ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- Matthew 12:16–19 ಮತ್ತಾಯನು 12:16–19ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು; ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ-- ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು. ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
- Mark 1:43–44 ಮಾರ್ಕನು 1:43–44ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು; ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
- John 10:37–38 ಯೋಹಾನನು 10:37–38ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ. ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- Matthew 5:17 ಮತ್ತಾಯನು 5:17ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.
- Isaiah 42:21 ಯೆಶಾಯ 42:21ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.