Matthew · chapter 8 · verse 5
Matthew 8:5 in Kannada
ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
Idaada mele yesu kapernauminalli praveshisidaaga obba shataadhipatiyu aatana balige bandu--
Matthew 8:5 in English
- King James Version (KJV)
- And when Jesus was entered into Capernaum, there came unto him a centurion, beseeching him,
- World English Bible (WEB)
- When he came into Capernaum, a centurion came to him, asking him for help,
- American Standard Version (ASV)
- And when he was entered into Capernaum, there came unto him a centurion, beseeching him,
- Bible in Basic English (BBE)
- And when Jesus was come into Capernaum, a certain captain came to him with a request,
- Darby Translation (DBY)
- And when he had entered into Capernaum, a centurion came to him, beseeching him,
- Webster's Bible (WBS)
- And when Jesus had entered into Capernaum, there came to him a centurion, beseeching him,
- Young's Literal Translation (YLT)
- And Jesus having entered into Capernaum, there came to him a centurion calling upon him,
Read in context
- 3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
- 4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- 5ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
- 6ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.
- 7ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.
Cross references
- Luke 7:1–10 ಲೂಕನು 7:1–10ತನ್ನ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ ಆತನು ಕಪೆರ್ನೌಮಿನಲ್ಲಿ ಪ್ರವೇಶಿಸಿದನು. ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು. ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು. ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ. ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು. ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ. ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು; ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು. ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Acts 27:43 ಅಪೊಸ್ತಲರ ಕೃತ್ಯಗಳು 27:43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- Acts 10:1–33 ಅಪೊಸ್ತಲರ ಕೃತ್ಯಗಳು 10:1–33ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು. ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು. ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು. ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು. ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು. ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು. ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು. ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು. ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು. ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು. ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು. ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು-- ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು. ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- Acts 27:31 ಅಪೊಸ್ತಲರ ಕೃತ್ಯಗಳು 27:31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
- Mark 15:39 ಮಾರ್ಕನು 15:39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
- Matthew 4:13 ಮತ್ತಾಯನು 4:13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
- Acts 23:17 ಅಪೊಸ್ತಲರ ಕೃತ್ಯಗಳು 23:17ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
- Acts 27:13 ಅಪೊಸ್ತಲರ ಕೃತ್ಯಗಳು 27:13ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
- Acts 23:23 ಅಪೊಸ್ತಲರ ಕೃತ್ಯಗಳು 23:23ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
- Acts 22:25 ಅಪೊಸ್ತಲರ ಕೃತ್ಯಗಳು 22:25ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
- Mark 2:1 ಮಾರ್ಕನು 2:1ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.
Original words (Greek)
- And · G1161δέ dé
- when · G1525εἰσέρχομαι eisérchomai
- Jesus · G2424Ἰησοῦς Iēsoûs
- entered · G1525εἰσέρχομαι eisérchomai
- into · G1519εἰς eis
- Capernaum · G2584Καπερναούμ Kapernaoúm
- came · G4334προσέρχομαι prosérchomai
- him · G846αὐτός autós
- centurion · G1543ἑκατοντάρχης hekatontárchēs
- beseeching · G3870παρακαλέω parakaléō
- him · G846αὐτός autós