Matthew · chapter 9 · verse 15
Matthew 9:15 in Kannada
ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
Adakke yesu avarige--madalinganu tamma joteyalliruva tanaka madalagittiya mane makkalu duhkhapaduvare? Aadare madalinganu avarinda tegeyalpaduva divasagalu baruvavu; aaga avaru upavaasa maaduvaru.
Matthew 9:15 in English
- King James Version (KJV)
- And Jesus said unto them, Can the children of the bridechamber mourn, as long as the bridegroom is with them? but the days will come, when the bridegroom shall be taken from them, and then shall they fast.
- World English Bible (WEB)
- Jesus said to them, “Can the friends of the bridegroom mourn as long as the bridegroom is with them? But the days will come when the bridegroom will be taken away from them, and then they will fast.
- American Standard Version (ASV)
- And Jesus said unto them, Can the sons of the bridechamber mourn, as long as the bridegroom is with them? but the days will come, when the bridegroom shall be taken away from them, and then will they fast.
- Bible in Basic English (BBE)
- And Jesus said to them, Will the friends of the newly-married man be sad as long as he is with them? But the days will come when he will be taken away from them, and then will they go without food.
- Darby Translation (DBY)
- And Jesus said to them, Can the sons of the bridechamber mourn so long as the bridegroom is with them? But days will come when the bridegroom will have been taken away from them, and then they will fast.
- Webster's Bible (WBS)
- And Jesus said to them, Can the children of the bride-chamber mourn, as long as the bridegroom is with them? but the days will come, when the bridegroom shall be taken from them, and then they will fast.
- Young's Literal Translation (YLT)
- And Jesus said to them, 'Can the sons of the bride-chamber mourn, so long as the bridegroom is with them? but days shall come when the bridegroom may be taken from them, and then they shall fast.
Read in context
- 13ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
- 14ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
- 15ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
- 16ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.
- 17ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
Cross references
- Revelation 19:9 ಪ್ರಕಟನೆ 19:9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Revelation 21:2 ಪ್ರಕಟನೆ 21:2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- Matthew 25:1–10 ಮತ್ತಾಯನು 25:1–10ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು. ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು. ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ, ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು. ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು. ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು; ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು. ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು. ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- John 16:20–22 ಯೋಹಾನನು 16:20–22ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Acts 13:1–3 ಅಪೊಸ್ತಲರ ಕೃತ್ಯಗಳು 13:1–3ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ. ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- Psalm 45:14–15 ಕೀರ್ತನೆಗಳು 45:14–15ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ. ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು.
- Isaiah 22:12 ಯೆಶಾಯ 22:12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- Luke 24:13–21 ಲೂಕನು 24:13–21ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು. ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು. ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು. ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ. ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು. ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು. ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ; ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು. ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
- John 16:6 ಯೋಹಾನನು 16:6ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
- 1 Corinthians 7:5 1 ಕೊರಿಂಥದವರಿಗೆ 7:5ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.