Matthew · chapter 9 · verse 18
Matthew 9:18 in Kannada
ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
Aatanu ee vishayagalannu avarondige maatanaaduttiddaaga igo, obba adhikaariyu bandu aatanannu aaraadhisi--nanna magalu ideegale sattu hogiruvalu; aadare neenu bandu aakeya mele ninna kaiyannidu; aaga avalu badukuvalu endu helidanu.
Matthew 9:18 in English
- King James Version (KJV)
- While he spake these things unto them, behold, there came a certain ruler, and worshipped him, saying, My daughter is even now dead: but come and lay thy hand upon her, and she shall live.
- World English Bible (WEB)
- While he told these things to them, behold, a ruler came and worshiped him, saying, “My daughter has just died, but come and lay your hand on her, and she will live.”
- American Standard Version (ASV)
- While he spake these things unto them, behold, there came a ruler, and worshipped him, saying, My daughter is even now dead: but come and lay thy hand upon her, and she shall live.
- Bible in Basic English (BBE)
- While he was saying these things to them, there came a ruler and gave him worship, saying, My daughter is even now dead; but come and put your hand on her, and she will come back to life.
- Darby Translation (DBY)
- As he spoke these things to them, behold, a ruler coming in did homage to him, saying, My daughter has by this died; but come and lay thy hand upon her and she shall live.
- Webster's Bible (WBS)
- While he was speaking these things to them, behold, there came a certain ruler, and worshiped him, saying, My daughter is even now dead: but come and lay thy hand upon her, and she will live.
- Young's Literal Translation (YLT)
- While he is speaking these things to them, lo, a ruler having come, was bowing to him, saying that 'My daughter just now died, but, having come, lay thy hand upon her, and she shall live.'
Read in context
- 16ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.
- 17ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- 18ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
- 19ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.
- 20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
Cross references
- Mark 5:22–43 ಮಾರ್ಕನು 5:22–43ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು-- ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು. ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ. ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು. ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು. ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು. ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು. ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು. ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು. ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು. ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು. ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು. ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ. ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು. ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು. ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ. ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು. ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- Luke 8:41–56 ಲೂಕನು 8:41–56ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು. ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು. ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು. ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು. ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು. ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು. ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು. ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು. ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ. ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು. ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು. ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- Matthew 8:2 ಮತ್ತಾಯನು 8:2ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
- Luke 13:14 ಲೂಕನು 13:14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
- 2 Kings 5:11 2 ಅರಸುಗಳು 5:11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
- John 4:47–49 ಯೋಹಾನನು 4:47–49ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು. ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು. ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
- John 11:32 ಯೋಹಾನನು 11:32ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
- Matthew 9:24 ಮತ್ತಾಯನು 9:24ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
- John 11:21–22 ಯೋಹಾನನು 11:21–22ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ. ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು.
- Matthew 28:17 ಮತ್ತಾಯನು 28:17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
- Acts 10:25–26 ಅಪೊಸ್ತಲರ ಕೃತ್ಯಗಳು 10:25–26ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
- Matthew 14:33 ಮತ್ತಾಯನು 14:33ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
Original words (Greek)
- While · G2980λαλέω laléō
- he · G846αὐτός autós
- spake · G2980λαλέω laléō
- things · G5023ταῦτα taûta
- them · G846αὐτός autós
- behold · G2400ἰδού idoú
- came · G2064ἔρχομαι érchomai
- ruler · G758ἄρχων árchōn
- and · G2064ἔρχομαι érchomai
- worshipped · G4352προσκυνέω proskynéō
- him · G846αὐτός autós
- saying · G3004λέγω légō
- My · G3450μοῦ moû
- daughter · G2364θυγάτηρ thygátēr
- is · G5053τελευτάω teleutáō
- now · G737ἄρτι árti
- dead · G5053τελευτάω teleutáō
- but · G235ἀλλά allá
- and · G2064ἔρχομαι érchomai
- lay · G2007ἐπιτίθημι epitíthēmi
- thy · G4675σοῦ soû
- hand · G5495χείρ cheír
- upon · G1909ἐπί epí
- her · G846αὐτός autós
- and · G2532καί kaí
- live · G2198ζάω záō