Matthew · chapter 9 · verse 30
Matthew 9:30 in Kannada
ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
Aaga avara kannugalu tereyalpattavu; mattu yesu avarige--idu yaarigoo gottaagabaaradu nodiri endu avarige khanditavaagi appanekottu helidanu.
Matthew 9:30 in English
- King James Version (KJV)
- And their eyes were opened; and Jesus straitly charged them, saying, See [that] no man know [it].
- World English Bible (WEB)
- Then their eyes were opened. Jesus strictly commanded them, saying, “See that no one knows about this.”
- American Standard Version (ASV)
- And their eyes were opened. And Jesus strictly charged them, saying, See that no man know it.
- Bible in Basic English (BBE)
- And their eyes were made open. And Jesus said to them sharply, Let no man have knowledge of it.
- Darby Translation (DBY)
- And their eyes were opened; and Jesus charged them sharply, saying, See, let no man know it.
- Webster's Bible (WBS)
- And their eyes were opened; and Jesus strictly charged them, saying, See [that] no man know [it] .
- Young's Literal Translation (YLT)
- and their eyes were opened, and Jesus strictly charged them, saying, 'See, let no one know;'
Read in context
- 28ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
- 29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- 30ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- 31ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.
- 32ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
Cross references
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- Luke 5:14 ಲೂಕನು 5:14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- Mark 5:43 ಮಾರ್ಕನು 5:43ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- Matthew 17:9 ಮತ್ತಾಯನು 17:9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
- Luke 8:56 ಲೂಕನು 8:56ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- Matthew 12:16 ಮತ್ತಾಯನು 12:16ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
- Psalm 146:8 ಕೀರ್ತನೆಗಳು 146:8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- Isaiah 35:5 ಯೆಶಾಯ 35:5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- John 9:7–26 ಯೋಹಾನನು 9:7–26ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು. ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು. ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು. ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು. ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು; ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು. ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು. ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು. ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು. ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ. ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು. ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು. ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು. ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು. ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು. ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು. ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು. ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
- Isaiah 52:13 ಯೆಶಾಯ 52:13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
- Isaiah 42:7 ಯೆಶಾಯ 42:7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.