Matthew · chapter 9 · verse 5
Matthew 9:5 in Kannada
ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
Yaavadu sulabha--ninna paapagalu ninage kshamisalpattive annuvado? Illave--eddu nade annuvado?
Matthew 9:5 in English
- King James Version (KJV)
- For whether is easier, to say, [Thy] sins be forgiven thee; or to say, Arise, and walk?
- World English Bible (WEB)
- For which is easier, to say, ‘Your sins are forgiven;’ or to say, ‘Get up, and walk’?
- American Standard Version (ASV)
- For which is easier, to say, Thy sins are forgiven; or to say, Arise, and walk?
- Bible in Basic English (BBE)
- For which is the simpler, to say, You have forgiveness for your sins; or to say, Get up and go?
- Darby Translation (DBY)
- For which is easier: to say, Thy sins are forgiven; or to say, Rise up and walk?
- Webster's Bible (WBS)
- For which is easier, to say, Thy sins are forgiven thee; or to say, Arise, and walk?
- Young's Literal Translation (YLT)
- for which is easier? to say, The sins have been forgiven to thee; or to say, Rise, and walk?
Read in context
- 3ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.
- 4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- 5ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
- 6ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
- 7ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
Cross references
- John 5:8–14 ಯೋಹಾನನು 5:8–14ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು. ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು. ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು. ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು. ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು. ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- Mark 2:9–12 ಮಾರ್ಕನು 2:9–12ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ? ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)-- ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
- Acts 3:16 ಅಪೊಸ್ತಲರ ಕೃತ್ಯಗಳು 3:16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
- Luke 5:23–25 ಲೂಕನು 5:23–25ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ? ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
- Acts 14:8–11 ಅಪೊಸ್ತಲರ ಕೃತ್ಯಗಳು 14:8–11ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು. ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು-- ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು. ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
- Acts 3:6–11 ಅಪೊಸ್ತಲರ ಕೃತ್ಯಗಳು 3:6–11ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು. ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
- Isaiah 35:5–6 ಯೆಶಾಯ 35:5–6ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Acts 9:34 ಅಪೊಸ್ತಲರ ಕೃತ್ಯಗಳು 9:34ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
- John 5:17–18 ಯೋಹಾನನು 5:17–18ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು. ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
- Acts 4:9–10 ಅಪೊಸ್ತಲರ ಕೃತ್ಯಗಳು 4:9–10ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.