Micah · chapter 1 · verse 3
Micah 1:3 in Kannada
ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.
Igo, kartanu tanna sthaanadinda horaduttaane; aatanu ilidu bhoomiya unnatavaada sthalagala mele tuliyuvanu.
Micah 1:3 in English
- King James Version (KJV)
- For, behold, the LORD cometh forth out of his place, and will come down, and tread upon the high places of the earth.
- World English Bible (WEB)
- For behold, the LORD comes out of his place, and will come down and tread on the high places of the earth.
- American Standard Version (ASV)
- For, behold, Jehovah cometh forth out of his place, and will come down, and tread upon the high places of the earth.
- Bible in Basic English (BBE)
- For see, the Lord is coming out from his place, and will come down, stepping on the high places of the earth.
- Darby Translation (DBY)
- For behold, Jehovah cometh forth out of his place, and will come down, and tread upon the high places of the earth.
- Webster's Bible (WBS)
- For behold, the LORD cometh forth from his place, and will come down, and tread upon the high places of the earth.
- Young's Literal Translation (YLT)
- For lo, Jehovah is going out from His place, And He hath come down, And hath trodden on high places of earth.
Read in context
- 1ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
- 2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
- 3ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.
- 4ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- 5ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?
Cross references
- Amos 4:13 ಆಮೋಸ 4:13ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Deuteronomy 32:13 ಧರ್ಮೋಪದೇಶಕಾಂಡ 32:13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
- Habakkuk 3:19 ಹಬಕ್ಕೂಕ 3:19ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Psalm 115:3 ಕೀರ್ತನೆಗಳು 115:3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
- Job 40:12 ಯೋಬನು 40:12ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Isaiah 64:1–2 ಯೆಶಾಯ 64:1–2ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
- Hosea 5:14–15 ಹೋಶೇಯ 5:14–15ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು. ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Isaiah 2:10–19 ಯೆಶಾಯ 2:10–19ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ. ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು. ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು. ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು. ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- Ezekiel 3:12 ಯೆಹೆಜ್ಕೇಲನು 3:12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
- Deuteronomy 33:29 ಧರ್ಮೋಪದೇಶಕಾಂಡ 33:29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.