Micah · chapter 1 · verse 6
Micah 1:6 in Kannada
ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
Heegiruvadarinda naanu samaaryavannu holada dibbeyaagiyoo draakshe balli neduva sthalavaagiyoo maaduvenu; adara kallugalannu tagginalli suridubittu; adara astivaaragalannu hora geduvenu.
Micah 1:6 in English
- King James Version (KJV)
- Therefore I will make Samaria as an heap of the field, [and] as plantings of a vineyard: and I will pour down the stones thereof into the valley, and I will discover the foundations thereof.
- World English Bible (WEB)
- Therefore I will make Samaria like a rubble heap of the field, like places for planting vineyards; and I will pour down its stones into the valley, and I will uncover its foundations.
- American Standard Version (ASV)
- Therefore I will make Samaria as a heap of the field, [and] as places for planting vineyards; and I will pour down the stones thereof into the valley, and I will uncover the foundations thereof.
- Bible in Basic English (BBE)
- So I will make Samaria into a field and the plantings of a vine-garden: I will send its stones falling down into the valley, uncovering its bases.
- Darby Translation (DBY)
- Therefore will I make Samaria as a heap of the field, as plantings of a vineyard; and I will pour down the stones thereof into the valley, and I will lay bare the foundations thereof.
- Webster's Bible (WBS)
- Therefore I will make Samaria as a heap of the field, [and] as plantings of a vineyard: and I will pour down her stones into the valley, and I will lay bare her foundations.
- Young's Literal Translation (YLT)
- And I have set Samaria for a heap of the field, For plantations of a vineyard, And poured out into a valley her stones, And her foundations I uncover.
Read in context
- 4ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- 5ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?
- 6ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
- 7ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು.
- 8ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
Cross references
- Ezekiel 13:14 ಯೆಹೆಜ್ಕೇಲನು 13:14ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- 2 Kings 19:25 2 ಅರಸುಗಳು 19:25ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
- Lamentations 4:1 ಪ್ರಲಾಪಗಳು 4:1ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
- Isaiah 25:2 ಯೆಶಾಯ 25:2ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
- Jeremiah 51:25 ಯೆರೆಮೀಯ 51:25ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
- Matthew 24:2 ಮತ್ತಾಯನು 24:2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
- Amos 5:11 ಆಮೋಸ 5:11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Isaiah 25:12 ಯೆಶಾಯ 25:12ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
- Habakkuk 3:13 ಹಬಕ್ಕೂಕ 3:13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.