Micah · chapter 1 · verse 9
Micah 1:9 in Kannada
ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
Adara gaayavu gunavaaga danthaddu, yaakandare adu yehoodakke bantu; nanna janara baagaligoo yeroosalemina mattigoo muttiddaane.
Micah 1:9 in English
- King James Version (KJV)
- For her wound [is] incurable; for it is come unto Judah; he is come unto the gate of my people, [even] to Jerusalem.
- World English Bible (WEB)
- For her wounds are incurable; for it has come even to Judah. It reaches to the gate of my people, even to Jerusalem.
- American Standard Version (ASV)
- For her wounds are incurable; for it is come even unto Judah; it reacheth unto the gate of my people, even to Jerusalem.
- Bible in Basic English (BBE)
- For her wounds may not be made well: for it has come even to Judah, stretching up to the doorway of my people, even to Jerusalem.
- Darby Translation (DBY)
- For her wounds are incurable; for it is come even unto Judah, it reacheth unto the gate of my people, even to Jerusalem.
- Webster's Bible (WBS)
- For her wound [is] incurable; for it is come to Judah; he is come to the gate of my people, [even] to Jerusalem.
- Young's Literal Translation (YLT)
- For mortal [are] her wounds, For it hath come unto Judah, It hath come to a gate of My people — to Jerusalem.
Read in context
- 7ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು.
- 8ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
- 9ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- 10ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
- 11ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
Cross references
- Jeremiah 30:11–15 ಯೆರೆಮೀಯ 30:11–15ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ. ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
- Micah 1:12 ಮೀಕ 1:12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
- 2 Chronicles 32:1–23 2 ಪೂರ್ವಕಾಲವೃತ್ತಾಂತ 32:1–23ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು. ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು. ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು. ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು. ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ-- ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ. ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು. ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ-- ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ? ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ? ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ? ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ? ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು? ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ. ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು. ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು. ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು. ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು. ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು. ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು. ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು. ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
- Jeremiah 15:18 ಯೆರೆಮೀಯ 15:18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
- Isaiah 8:7–8 ಯೆಶಾಯ 8:7–8ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Isaiah 1:5–6 ಯೆಶಾಯ 1:5–6ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Isaiah 3:26 ಯೆಶಾಯ 3:26ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
- Isaiah 37:22–36 ಯೆಶಾಯ 37:22–36ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ. ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ? ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ; ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ. ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು; ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು. ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು. ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ. ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು. ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು. ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು. ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ. ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ. ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ. ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- 2 Kings 18:9–13 2 ಅರಸುಗಳು 18:9–13ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು. ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
- Isaiah 10:28–32 ಯೆಶಾಯ 10:28–32ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ. ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು. ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು. ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು. ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.