Micah · chapter 2 · verse 1
Micah 2:1 in Kannada
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
Aparaadhavannu yochisi, tamma haasigegala mele kettaddannu nadisuvavarige ayyo! Hottaare belakaaguvaaga adannu maaduttaare; adu avara kaivashadallide.
Micah 2:1 in English
- King James Version (KJV)
- Woe to them that devise iniquity, and work evil upon their beds! when the morning is light, they practise it, because it is in the power of their hand.
- World English Bible (WEB)
- Woe to those who devise iniquity and work evil on their beds! When the morning is light, they practice it, because it is in the power of their hand.
- American Standard Version (ASV)
- Woe to them that devise iniquity and work evil upon their beds! when the morning is light, they practise it, because it is in the power of their hand.
- Bible in Basic English (BBE)
- A curse on the designers of evil, working on their beds! in the morning light they do it, because it is in their power.
- Darby Translation (DBY)
- Woe to them that devise iniquity and work evil upon their beds! When the morning is light they practise it, because it is in the power of their hand.
- Webster's Bible (WBS)
- Woe to them that devise iniquity, and work evil upon their beds! when the morning is light, they practice it, because it is in the power of their hand.
- Young's Literal Translation (YLT)
- Woe [to] those devising iniquity, And working evil on their beds, In the light of the morning they do it, For their hand is — to God.
Read in context
- 1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
- 2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- 3ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
Cross references
- Psalm 36:4 ಕೀರ್ತನೆಗಳು 36:4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
- Isaiah 32:7 ಯೆಶಾಯ 32:7ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
- Psalm 7:14–16 ಕೀರ್ತನೆಗಳು 7:14–16ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Hosea 7:6–7 ಹೋಶೇಯ 7:6–7ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ. ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.
- Nahum 1:11 ನಹೂಮ 1:11ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
- Proverbs 6:12–19 ಜ್ಞಾನೋಕ್ತಿಗಳು 6:12–19ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು. ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ. ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ. ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು. ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ: ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು, ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು, ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- Romans 1:30 ರೋಮಾಪುರದವರಿಗೆ 1:30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- Proverbs 3:27 ಜ್ಞಾನೋಕ್ತಿಗಳು 3:27ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
- Deuteronomy 28:32 ಧರ್ಮೋಪದೇಶಕಾಂಡ 28:32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
- Luke 22:2–6 ಲೂಕನು 22:2–6ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು. ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು. ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು. ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು. ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.