Micah · chapter 3 · verse 8
Micah 3:8 in Kannada
ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
Aadare nishchayavaagi naanu yaako byarige avana aparaadhavannoo israayelige avana paapavannoo tilisuvadakke devara aatmana mukhaantara shaktiyindaloo nyaayadindaloo traanadindaloo tumbiddene.
Micah 3:8 in English
- King James Version (KJV)
- But truly I am full of power by the spirit of the LORD, and of judgment, and of might, to declare unto Jacob his transgression, and to Israel his sin.
- World English Bible (WEB)
- But as for me, I am full of power by the LORD’s Spirit, and of judgment, and of might, to declare to Jacob his disobedience, and to Israel his sin.
- American Standard Version (ASV)
- But as for me, I am full of power by the Spirit of Jehovah, and of judgment, and of might, to declare unto Jacob his transgression, and to Israel his sin.
- Bible in Basic English (BBE)
- But I truly am full of the spirit of the Lord, with power of judging and with strength to make clear to Jacob his wrongdoing and to Israel his sin.
- Darby Translation (DBY)
- But truly I am filled with power by the Spirit of Jehovah, and with judgment and with might, to declare unto Jacob his transgression, and to Israel his sin.
- Webster's Bible (WBS)
- But truly I am full of power by the spirit of the LORD, and of judgment, and of might, to declare to Jacob his transgression, and to Israel his sin.
- Young's Literal Translation (YLT)
- And yet I have been full of power by the Spirit of Jehovah, And of judgment, and of might, To declare to Jacob his transgression, And to Israel his sin.
Read in context
- 6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
- 7ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
- 8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
- 9ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
- 10ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
Cross references
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- 1 Corinthians 2:12–13 1 ಕೊರಿಂಥದವರಿಗೆ 2:12–13ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು. ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
- 1 Corinthians 2:4 1 ಕೊರಿಂಥದವರಿಗೆ 2:4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
- Isaiah 11:2–3 ಯೆಶಾಯ 11:2–3ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
- Ezekiel 43:10 ಯೆಹೆಜ್ಕೇಲನು 43:10ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ.
- Ezekiel 16:2 ಯೆಹೆಜ್ಕೇಲನು 16:2ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.
- Acts 18:9–11 ಅಪೊಸ್ತಲರ ಕೃತ್ಯಗಳು 18:9–11ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು. ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
- Jeremiah 15:19–21 ಯೆರೆಮೀಯ 15:19–21ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ. ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Acts 7:54–57 ಅಪೊಸ್ತಲರ ಕೃತ್ಯಗಳು 7:54–57ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು. ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು-- ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು. ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
- Acts 4:8–12 ಅಪೊಸ್ತಲರ ಕೃತ್ಯಗಳು 4:8–12ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ, ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- Job 32:18 ಯೋಬನು 32:18ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
- Jeremiah 20:9 ಯೆರೆಮೀಯ 20:9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
Original words (Hebrew)
- truly · H199אוּלָם ʼûwlâm
- full · H4390מָלֵא mâlêʼ
- power · H3581כֹּחַ kôach
- spirit · H7307רוּחַ rûwach
- judgment · H4941מִשְׁפָּט mishpâṭ
- might · H1369גְּבוּרָה gᵉbûwrâh
- declare · H5046נָגַד nâgad
- Jacob · H3290יַעֲקֹב Yaʻăqôb
- transgression · H6588פֶּשַׁע peshaʻ
- Israel · H3478יִשְׂרָאֵל Yisrâʼêl
- sin · H2403חַטָּאָה chaṭṭâʼâh