Micah · chapter 4 · verse 7
Micah 4:7 in Kannada
ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
Kuntaadaddannu ulidadda nnaagiyoo tallibittiddannu balavaada janaangavaa giyoo maaduvenu; kartanu indininda sadaa kaalavoo cheeyon parvatadalli avara mele aaluvanu,
Micah 4:7 in English
- King James Version (KJV)
- And I will make her that halted a remnant, and her that was cast far off a strong nation: and the LORD shall reign over them in mount Zion from henceforth, even for ever.
- World English Bible (WEB)
- and I will make that which was lame a remnant, and that which was cast far off a strong nation: and the LORD will reign over them on Mount Zion from then on, even forever.”
- American Standard Version (ASV)
- and I will make that which was lame a remnant, and that which was cast far off a strong nation: and Jehovah will reign over them in mount Zion from henceforth even for ever.
- Bible in Basic English (BBE)
- And I will make her whose steps were uncertain a small band, and her who was feeble a strong nation: and the Lord will be their King in Mount Zion from now and for ever.
- Darby Translation (DBY)
- and I will make her that halted a remnant, and her that was cast far off a strong nation; and Jehovah shall reign over them in mount Zion, from henceforth even for ever.
- Webster's Bible (WBS)
- And I will make her that halted a remnant, and her that was cast far off a strong nation: and the LORD will reign over them in mount Zion from henceforth, even for ever.
- Young's Literal Translation (YLT)
- And I have set the halting for a remnant, And the far-off for a mighty nation, And reigned hath Jehovah over them in mount Zion, From henceforth, and unto the age.
Read in context
- 5ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
- 6ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
- 7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
- 8ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
- 9ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
Cross references
- Micah 5:7–8 ಮೀಕ 5:7–8ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ. ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Luke 1:33 ಲೂಕನು 1:33ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Micah 2:12 ಮೀಕ 2:12ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Micah 5:3 ಮೀಕ 5:3ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Isaiah 6:13 ಯೆಶಾಯ 6:13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Zechariah 9:13–17 ಜೆಕರ್ಯ 9:13–17ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ. ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು. ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು. ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು. ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
- Isaiah 66:8 ಯೆಶಾಯ 66:8ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.