Micah · chapter 5 · verse 13
Micah 5:13 in Kannada
ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
Ninna kettida vigrahagalannoo nintiruva ninna pratimegalannoo ninna madhyadolaginda kadidu biduvenu; neenu innu svanta kaikelasagalannu aaraadhisuvadilla.
Micah 5:13 in English
- King James Version (KJV)
- Thy graven images also will I cut off, and thy standing images out of the midst of thee; and thou shalt no more worship the work of thine hands.
- World English Bible (WEB)
- I will cut off your engraved images and your pillars from among you; and you shall no more worship the work of your hands.
- American Standard Version (ASV)
- and I will cut off thy graven images and thy pillars out of the midst of thee; and thou shalt no more worship the work of thy hands;
- Bible in Basic English (BBE)
- And I will have your images and your pillars cut off from you; and you will no longer give worship to the work of your hands.
- Darby Translation (DBY)
- Thy graven images also will I cut off, and thy statues out of the midst of thee; and thou shalt no more bow down to the work of thy hands.
- Webster's Bible (WBS)
- Thy graven images also will I cut off, and thy standing images out of the midst of thee; and thou shalt no more worship the work of thy hands.
- Young's Literal Translation (YLT)
- And I have cut off thy graven images, And thy standing-pillars out of thy midst, And thou dost not bow thyself any more To the work of thy hands.
Read in context
- 11ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
- 12ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.
- 13ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
- 14ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
- 15ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
Cross references
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Isaiah 17:7–8 ಯೆಶಾಯ 17:7–8ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು. ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
- Hosea 14:3 ಹೋಶೇಯ 14:3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
- Ezekiel 37:23 ಯೆಹೆಜ್ಕೇಲನು 37:23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
- Hosea 2:16–17 ಹೋಶೇಯ 2:16–17ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ. ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
- Hosea 14:8 ಹೋಶೇಯ 14:8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Zechariah 13:2 ಜೆಕರ್ಯ 13:2ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Isaiah 2:8 ಯೆಶಾಯ 2:8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.