Micah · chapter 5 · verse 6
Micah 5:6 in Kannada
ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.
Avaru ashshoorina deshavannu kattiyindaloo nimrodana deshavannu adara praveshagalalliyoo haalumaaduvaru; ashshooryanu namma deshadalli bandu namma praantyagalalli tuliyuvaaga aatanu nammannu tappisuvanu.
Micah 5:6 in English
- King James Version (KJV)
- And they shall waste the land of Assyria with the sword, and the land of Nimrod in the entrances thereof: thus shall he deliver [us] from the Assyrian, when he cometh into our land, and when he treadeth within our borders.
- World English Bible (WEB)
- They will rule the land of Assyria with the sword, and the land of Nimrod in its gates. He will deliver us from the Assyrian, when he invades our land, and when he marches within our border.
- American Standard Version (ASV)
- And they shall waste the land of Assyria with the sword, and the land of Nimrod in the entrances thereof: and he shall deliver us from the Assyrian, when he cometh into our land, and when he treadeth within our border.
- Bible in Basic English (BBE)
- And they will make waste the land of Assyria with the sword, and the land of Nimrod with the edge of the sword: he will give us salvation from the Assyrian when he comes into our country, when his feet come inside the limit of our land.
- Darby Translation (DBY)
- And they shall waste the land of Asshur with the sword, and the land of Nimrod in the entrances thereof; and he shall deliver [us] from the Assyrian, when he cometh into our land, and when he treadeth within our borders.
- Webster's Bible (WBS)
- And they shall waste the land of Assyria with the sword, and the land of Nimrod in its entrances: thus will he deliver [us] from the Assyrian, when he cometh into our land, and when he treadeth within our borders.
- Young's Literal Translation (YLT)
- And they have afflicted the land of Asshur with the sword, And the land of Nimrod at its openings, And he hath delivered from Asshur when he doth come into our land, And when he treadeth in our borders.
Read in context
- 4ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
- 5ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
- 6ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.
- 7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
- 8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
Cross references
- Luke 1:74 ಲೂಕನು 1:74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- Isaiah 14:25 ಯೆಶಾಯ 14:25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- Genesis 10:8–11 ಆದಿಕಾಂಡ 10:8–11ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು. ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು. ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು. ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
- 2 Kings 19:32–35 2 ಅರಸುಗಳು 19:32–35ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ. ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ. ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ. ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- 2 Kings 17:3–5 2 ಅರಸುಗಳು 17:3–5ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು. ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು. ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
- Luke 1:71 ಲೂಕನು 1:71ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
- Isaiah 14:2 ಯೆಶಾಯ 14:2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Isaiah 10:5–12 ಯೆಶಾಯ 10:5–12ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ. ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- 2 Kings 18:9–15 2 ಅರಸುಗಳು 18:9–15ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು. ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು. ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.
Original words (Hebrew)
- waste · H7462רָעָה râʻâh
- land · H776אֶרֶץ ʼerets
- Assyria · H804אַשּׁוּר ʼAshshûwr
- sword · H2719חֶרֶב chereb
- land · H776אֶרֶץ ʼerets
- Nimrod · H5248נִמְרוֹד Nimrôwd
- entrances · H6607פֶּתַח pethach
- deliver · H5337נָצַל nâtsal
- Assyrian · H804אַשּׁוּר ʼAshshûwr
- cometh · H935בּוֹא bôwʼ
- land · H776אֶרֶץ ʼerets
- treadeth · H1869דָּרַךְ dârak
- borders · H1366גְּבוּל gᵉbûwl