Micah · chapter 6 · verse 10
Micah 6:10 in Kannada
ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
Dushtara maneyalli dushtatvada bokkasagaloo asahyavaadantha kadimeyaada alateyoo unto?
Micah 6:10 in English
- King James Version (KJV)
- Are there yet the treasures of wickedness in the house of the wicked, and the scant measure [that is] abominable?
- World English Bible (WEB)
- Are there yet treasures of wickedness in the house of the wicked, and a short ephah that is accursed?
- American Standard Version (ASV)
- Are there yet treasures of wickedness in the house of the wicked, and a scant measure that is abominable?
- Bible in Basic English (BBE)
- Am I to let the stores of the evil-doer go out of my memory, and the short measure, which is cursed?
- Darby Translation (DBY)
- Are there yet treasures of wickedness in the house of the wicked, and the scant measure [which is] abominable?
- Webster's Bible (WBS)
- Are there yet the treasures of wickedness in the house of the wicked, and the scant measure [that is] abominable?
- Young's Literal Translation (YLT)
- Are there yet [in] the house of the wicked Treasures of wickedness, And the abhorred scanty ephah?
Read in context
- 8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- 9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
- 10ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
- 11ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?
- 12ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
Cross references
- Amos 3:10 ಆಮೋಸ 3:10ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Jeremiah 5:26–27 ಯೆರೆಮೀಯ 5:26–27ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ. ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
- Amos 8:5–6 ಆಮೋಸ 8:5–6ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
- Proverbs 21:6 ಜ್ಞಾನೋಕ್ತಿಗಳು 21:6ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ.
- Proverbs 20:10 ಜ್ಞಾನೋಕ್ತಿಗಳು 20:10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
- Deuteronomy 25:13–16 ಧರ್ಮೋಪದೇಶಕಾಂಡ 25:13–16ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು. ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು. ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು. ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- Zechariah 5:3–4 ಜೆಕರ್ಯ 5:3–4ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Hosea 12:7–8 ಹೋಶೇಯ 12:7–8ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ. ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
- Proverbs 11:1 ಜ್ಞಾನೋಕ್ತಿಗಳು 11:1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- Leviticus 19:35–36 ಯಾಜಕಕಾಂಡ 19:35–36ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ. ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- James 5:1–4 ಯಾಕೋಬನು 5:1–4ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- 2 Kings 5:23–24 2 ಅರಸುಗಳು 5:23–24ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು. ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.