Micah · chapter 6 · verse 2
Micah 6:2 in Kannada
ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
O bettagale, bhoomiya balavaada astivaaragalaada bandegale, kartana vyaajyavannu keliri; kartanige tanna janara sangada vyaajya untu, israayelina sangada aatanu tarkisuttaane.
Micah 6:2 in English
- King James Version (KJV)
- Hear ye, O mountains, the LORD’s controversy, and ye strong foundations of the earth: for the LORD hath a controversy with his people, and he will plead with Israel.
- World English Bible (WEB)
- Hear, you mountains, the LORD’s indictment, and you enduring foundations of the earth; for the LORD has a case against his people, and he will contend with Israel.
- American Standard Version (ASV)
- Hear, O ye mountains, Jehovah’s controversy, and ye enduring foundations of the earth; for Jehovah hath a controversy with his people, and he will contend with Israel.
- Bible in Basic English (BBE)
- Give ear, O you mountains, to the Lord's cause, and take note, you bases of the earth: for the Lord has a cause against his people, and he will take it up with Israel.
- Darby Translation (DBY)
- Hear, ye mountains, Jehovah's controversy, and ye, unchanging foundations of the earth; for Jehovah hath a controversy with his people, and he will plead with Israel.
- Webster's Bible (WBS)
- Hear ye, O mountains, the LORD'S controversy, and ye strong foundations of the earth: for the LORD hath a controversy with his people, and he will plead with Israel.
- Young's Literal Translation (YLT)
- Hear, O mountains, the strife of Jehovah, Ye strong ones — foundations of earth! For a strife [is] to Jehovah, with His people, And with Israel He doth reason.
Read in context
- 1ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
- 2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- 3ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
- 4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
Cross references
- Hosea 12:2 ಹೋಶೇಯ 12:2ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
- Hosea 4:1 ಹೋಶೇಯ 4:1ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Jeremiah 31:37 ಯೆರೆಮೀಯ 31:37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
- Proverbs 8:29 ಜ್ಞಾನೋಕ್ತಿಗಳು 8:29ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- 2 Samuel 22:8 2 ಸಮುವೇಲನು 22:8ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
- Isaiah 5:3 ಯೆಶಾಯ 5:3ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
- Jeremiah 25:31 ಯೆರೆಮೀಯ 25:31ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
- Ezekiel 20:35–36 ಯೆಹೆಜ್ಕೇಲನು 20:35–36ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು. ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Jeremiah 2:29–35 ಯೆರೆಮೀಯ 2:29–35ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ. ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ. ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ. ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ. ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ. ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ. ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
- Jeremiah 2:9 ಯೆರೆಮೀಯ 2:9ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.