Micah · chapter 6 · verse 5
Micah 6:5 in Kannada
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
Nanna janare, movaabina arasanaada baalaakanu yochisi ddannoo beyorana maganaada bilaamanu avanige uttaravaagi heliddannoo shitteemu modalu gondu gilgaalina varegoo aadaddannoo eega jnyaapaka maadikolliri. Aaga kartana neetiyannu tilukollu viri.
Micah 6:5 in English
- King James Version (KJV)
- O my people, remember now what Balak king of Moab consulted, and what Balaam the son of Beor answered him from Shittim unto Gilgal; that ye may know the righteousness of the LORD.
- World English Bible (WEB)
- My people, remember now what Balak king of Moab devised, and what Balaam the son of Beor answered him from Shittim to Gilgal, that you may know the righteous acts of the LORD.”
- American Standard Version (ASV)
- O my people, remember now what Balak king of Moab devised, and what Balaam the son of Beor answered him; [remember] from Shittim unto Gilgal, that ye may know the righteous acts of Jehovah.
- Bible in Basic English (BBE)
- O my people, keep in mind now what was designed by Balak, king of Moab, and the answer which Balaam, son of Beor, gave him; the events, from Shittim to Gilgal, so that you may be certain of the upright acts of the Lord.
- Darby Translation (DBY)
- My people, remember now what Balak king of Moab consulted, and what Balaam the son of Beor answered him, from Shittim unto Gilgal, that ye may know the righteousness of Jehovah.
- Webster's Bible (WBS)
- O my people, remember now what Balak king of Moab consulted, and what Balaam the son of Beor answered him from Shittim to Gilgal; that ye may know the righteousness of the LORD.
- Young's Literal Translation (YLT)
- O My people, remember, I pray you, What counsel did Balak king of Moab, What answer him did Balaam son of Beor, (From Shittim unto Gilgal,) In order to know the righteous acts of Jehovah.'
Read in context
- 3ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
- 4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
- 5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
- 6ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
- 7ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?
Cross references
- Joshua 5:9–10 ಯೆಹೋಶುವ 5:9–10ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು. ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
- Numbers 25:1 ಅರಣ್ಯಕಾಂಡ 25:1ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
- Judges 5:11 ನ್ಯಾಯಸ್ಥಾಪಕರು 5:11ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Joshua 4:19 ಯೆಹೋಶುವ 4:19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
- Deuteronomy 16:3 ಧರ್ಮೋಪದೇಶಕಾಂಡ 16:3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
- Joshua 24:9–10 ಯೆಹೋಶುವ 24:9–10ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು. ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.
- Psalm 143:11 ಕೀರ್ತನೆಗಳು 143:11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Deuteronomy 8:18 ಧರ್ಮೋಪದೇಶಕಾಂಡ 8:18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- Numbers 22:1–25 ಅರಣ್ಯಕಾಂಡ 22:1–25ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು. ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು. ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು. ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ. ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು. ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು. ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು. ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು. ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ-- ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು. ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ. ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ, ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು. ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು. ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು. ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು. ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು. ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು. ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು. ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು. ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು. ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು. ಆದರೆ ಕರ್ತನ ದೂತನು ದ್ರಾಕ್ಷೇತೋಟಗಳ ಹಾದಿಯಲ್ಲಿ ಈಚೆ ಆಚೆ ಗೋಡೆ ಇದ್ದಲ್ಲಿ ನಿಂತನು. ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
Original words (Hebrew)
- people · H5971עַם ʻam
- remember · H2142זָכַר zâkar
- Balak · H1111בָּלָק Bâlâq
- king · H4428מֶלֶךְ melek
- Moab · H4124מוֹאָב Môwʼâb
- consulted · H3289יָעַץ yâʻats
- Balaam · H1109בִּלְעָם Bilʻâm
- son · H1121בֵּן bên
- Beor · H1160בְּעוֹר Bᵉʻôwr
- answered · H6030עָנָה ʻânâh
- Shittim · H7851שִׁטִּים Shiṭṭîym
- Gilgal · H1537גִּלְגָּל Gilgâl
- know · H3045יָדַע yâdaʻ
- righteousness · H6666צְדָקָה tsᵉdâqâh