Micah · chapter 7 · verse 11
Micah 7:11 in Kannada
ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
Ninna godegalu tirugi kattalpaduva aa dinadalli nirnayavu dooravaagi hoguvadu.
Micah 7:11 in English
- King James Version (KJV)
- [In] the day that thy walls are to be built, [in] that day shall the decree be far removed.
- World English Bible (WEB)
- A day to build your walls! In that day, he will extend your boundary.
- American Standard Version (ASV)
- A day for building thy walls! in that day shall the decree be far removed.
- Bible in Basic English (BBE)
- A day for building your walls! in that day will your limits be stretched far and wide.
- Darby Translation (DBY)
- In the day when thy walls shall be built, on that day shall the established limit recede.
- Webster's Bible (WBS)
- [In] the day that thy walls are to be built, [in] that day shall the decree be far removed.
- Young's Literal Translation (YLT)
- The day to build thy walls! That day — removed is the limit.
Read in context
- 9ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- 10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- 11ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
- 12ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
- 13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
Cross references
- Amos 9:11–15 ಆಮೋಸ 9:11–15ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ. ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು. ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Isaiah 54:11 ಯೆಶಾಯ 54:11ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
- Nehemiah 2:8 ನೆಹೆಮೀಯ 2:8ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
- Nehemiah 4:6 ನೆಹೆಮೀಯ 4:6ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.
- Ezra 4:12–24 ಎಜ್ರನು 4:12–24ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ. ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ. ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ. ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ. ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು. ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು. ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು. ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು; ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು. ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ. ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು. ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು. ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
- Nehemiah 3:1–16 ನೆಹೆಮೀಯ 3:1–16ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು. ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು. ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು. ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು. ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ. ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು. ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು. ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು. ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು. ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು. ಹಾರೀಮನ ಮಗನಾದ ಮಲ್ಕೀ ಯನೂ ಪಹತ್ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು. ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು. ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು. ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು. ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು. ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
- Nehemiah 2:17 ನೆಹೆಮೀಯ 2:17ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
- Nehemiah 4:3 ನೆಹೆಮೀಯ 4:3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
- Daniel 9:25 ದಾನಿಯೇಲನು 9:25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.