Micah · chapter 7 · verse 12
Micah 7:12 in Kannada
ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
Aa dinadalli ashshoorinindaloo koteyulla pattanagalindaloo koteyinda nadiyavaregoo samudradinda samudrada varegoo bettadinda bettada varegoo ninna balige baruvaru.
Micah 7:12 in English
- King James Version (KJV)
- [In] that day [also] he shall come even to thee from Assyria, and [from] the fortified cities, and from the fortress even to the river, and from sea to sea, and [from] mountain to mountain.
- World English Bible (WEB)
- In that day they will come to you from Assyria and the cities of Egypt, and from Egypt even to the River, and from sea to sea, and mountain to mountain.
- American Standard Version (ASV)
- In that day shall they come unto thee from Assyria and the cities of Egypt, and from Egypt even to the River, and from sea to sea, and [from] mountain to mountain.
- Bible in Basic English (BBE)
- In that day they will come to you from Assyria and the towns of Egypt, and from Egypt even to the River, and from sea to sea and from mountain to mountain.
- Darby Translation (DBY)
- In that day they shall come to thee from Assyria and the cities of Egypt, and from Egypt to the river, and from sea to sea, and from mountain to mountain.
- Webster's Bible (WBS)
- [In] that day [also] he shall come even to thee from Assyria, and [from] the fortified cities, and from the fortress even to the river, and from sea to sea, and [from] mountain to mountain.
- Young's Literal Translation (YLT)
- That day — even unto thee it doth come in, From Asshur and the cities of the fortress, And from the fortress even unto the river, And from sea to sea, and mount to mount.
Read in context
- 10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- 11ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
- 12ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
- 13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
- 14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
Cross references
- Isaiah 19:23–25 ಯೆಶಾಯ 19:23–25ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು. ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು. ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
- Isaiah 11:16 ಯೆಶಾಯ 11:16ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Hosea 11:11 ಹೋಶೇಯ 11:11ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
- Isaiah 27:12–13 ಯೆಶಾಯ 27:12–13ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು. ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Isaiah 60:4–9 ಯೆಶಾಯ 60:4–9ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Jeremiah 23:3 ಯೆರೆಮೀಯ 23:3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- Jeremiah 3:18 ಯೆರೆಮೀಯ 3:18ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
- Isaiah 43:6 ಯೆಶಾಯ 43:6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Ezekiel 37:21 ಯೆಹೆಜ್ಕೇಲನು 37:21ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
- Isaiah 66:19–20 ಯೆಶಾಯ 66:19–20ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು. ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
- Jeremiah 31:8 ಯೆರೆಮೀಯ 31:8ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
- Isaiah 49:12 ಯೆಶಾಯ 49:12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.