Micah · chapter 7 · verse 15
Micah 7:15 in Kannada
ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
Neenu aigupta deshadolaginda horaduva divasagala haage avanige aashcharyavaadavugalannu torisuvenu.
Micah 7:15 in English
- King James Version (KJV)
- According to the days of thy coming out of the land of Egypt will I shew unto him marvellous [things].
- World English Bible (WEB)
- “As in the days of your coming out of the land of Egypt, I will show them marvelous things.”
- American Standard Version (ASV)
- As in the days of thy coming forth out of the land of Egypt will I show unto them marvellous things.
- Bible in Basic English (BBE)
- As in the days when you came out from the land of Egypt, let us see things of wonder.
- Darby Translation (DBY)
- — As in the days of thy coming forth out of the land of Egypt, will I shew them marvellous things.
- Webster's Bible (WBS)
- According to the days of thy departure from the land of Egypt will I show to him marvelous [things] .
- Young's Literal Translation (YLT)
- According to the days of thy coming forth out of the land of Egypt, I do shew it wonderful things.
Read in context
- 13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
- 14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
- 15ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
- 16ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
- 17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
Cross references
- Psalm 78:12–72 ಕೀರ್ತನೆಗಳು 78:12–72ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು. ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು. ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು. ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು. ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು. ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು. ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು. ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು. ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ. ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು. ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು. ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು. ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು. ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು. ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು. ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ. ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು. ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ. ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು. ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು. ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು. ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ. ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು. ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು. ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು. ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು. ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು. ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು. ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ. ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು. ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು. ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು, ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು. ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ. ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ. ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು, ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು. ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ, ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- Exodus 3:20 ವಿಮೋಚನಕಾಂಡ 3:20ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Psalm 68:22 ಕೀರ್ತನೆಗಳು 68:22ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
- Isaiah 63:11–15 ಯೆಶಾಯ 63:11–15ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ. ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- Isaiah 11:16 ಯೆಶಾಯ 11:16ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Jeremiah 23:7–8 ಯೆರೆಮೀಯ 23:7–8ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ. ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.