Micah · chapter 7 · verse 17
Micah 7:17 in Kannada
ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
Avaru sarpadante dhoolannu nekkuvaru; bhoomiya krimigalante taavu randhragalinda horage baruvaru; namma devaraada kartanige avaru hedaruvaru; ninage bhayapaduvaru.
Micah 7:17 in English
- King James Version (KJV)
- They shall lick the dust like a serpent, they shall move out of their holes like worms of the earth: they shall be afraid of the LORD our God, and shall fear because of thee.
- World English Bible (WEB)
- They will lick the dust like a serpent. Like crawling things of the earth, they will come trembling out of their dens. They will come with fear to the LORD our God, and will be afraid because of you.
- American Standard Version (ASV)
- They shall lick the dust like a serpent; like crawling things of the earth they shall come trembling out of their close places; they shall come with fear unto Jehovah our God, and shall be afraid because of thee.
- Bible in Basic English (BBE)
- They will take dust as their food like a snake, like the things which go flat on the earth; they will come shaking with fear out of their secret places: they will come with fear to the Lord our God, full of fear because of you.
- Darby Translation (DBY)
- They shall lick dust like the serpent; like crawling things of the earth, they shall come trembling forth from their close places. They shall turn with fear to Jehovah our God, and shall be afraid because of thee.
- Webster's Bible (WBS)
- They shall lick the dust like a serpent, they shall move out of their holes like worms of the earth: they shall be afraid of the LORD our God, and shall fear because of thee.
- Young's Literal Translation (YLT)
- They lick dust as a serpent, as fearful things of earth, They tremble from their enclosures, Of Jehovah our God they are afraid, Yea, they are afraid of Thee.
Read in context
- 15ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
- 16ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
- 17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- 18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- 19ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
Cross references
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Psalm 72:9 ಕೀರ್ತನೆಗಳು 72:9ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
- Psalm 18:45 ಕೀರ್ತನೆಗಳು 18:45ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
- Revelation 6:15–17 ಪ್ರಕಟನೆ 6:15–17ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Genesis 3:14–15 ಆದಿಕಾಂಡ 3:14–15ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ. ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Isaiah 64:2 ಯೆಶಾಯ 64:2ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
- Lamentations 3:29 ಪ್ರಲಾಪಗಳು 3:29ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
- Joshua 2:9–11 ಯೆಹೋಶುವ 2:9–11ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- 1 Samuel 14:11 1 ಸಮುವೇಲನು 14:11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
- Exodus 15:14–16 ವಿಮೋಚನಕಾಂಡ 15:14–16ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- Isaiah 25:3 ಯೆಶಾಯ 25:3ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.