Micah · chapter 7 · verse 8
Micah 7:8 in Kannada
ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
Nanna shatruve, nanna mele santoshapadabeda; naanu biddiddaroo tirugi eluvenu; kattaleyalli kootukondaroo nanage belaku kartane.
Micah 7:8 in English
- King James Version (KJV)
- Rejoice not against me, O mine enemy: when I fall, I shall arise; when I sit in darkness, the LORD [shall be] a light unto me.
- World English Bible (WEB)
- Don’t rejoice against me, my enemy. When I fall, I will arise. When I sit in darkness, the LORD will be a light to me.
- American Standard Version (ASV)
- Rejoice not against me, O mine enemy: when I fall, I shall arise; when I sit in darkness, Jehovah will be a light unto me.
- Bible in Basic English (BBE)
- Do not be glad because of my sorrow, O my hater: after my fall I will be lifted up; when I am seated in the dark, the Lord will be a light to me.
- Darby Translation (DBY)
- Rejoice not against me, O mine enemy: though I fall, I shall arise; when I sit in darkness, Jehovah shall be a light unto me.
- Webster's Bible (WBS)
- Rejoice not against me, O my enemy: when I fall, I shall arise; when I sit in darkness, the LORD [will be] a light to me.
- Young's Literal Translation (YLT)
- Thou dost not rejoice over me, O mine enemy, When I have fallen, I have risen, When I sit in darkness Jehovah is a light to me.
Read in context
- 6ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- 7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- 8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- 9ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- 10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
Cross references
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Isaiah 9:2 ಯೆಶಾಯ 9:2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
- Psalm 112:4 ಕೀರ್ತನೆಗಳು 112:4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
- Psalm 107:10–15 ಕೀರ್ತನೆಗಳು 107:10–15ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು. ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- Proverbs 24:16–18 ಜ್ಞಾನೋಕ್ತಿಗಳು 24:16–18ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು. ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ; ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- Obadiah 1:12 ಓಬದ್ಯ 1:12ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Psalm 41:10–12 ಕೀರ್ತನೆಗಳು 41:10–12ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು. ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು. ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Psalm 38:16 ಕೀರ್ತನೆಗಳು 38:16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- Psalm 97:11 ಕೀರ್ತನೆಗಳು 97:11ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.