Nahum · chapter 1 · verse 11
Nahum 1:11 in Kannada
ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
Kartanige virodhavaagi duraa lochane maadi kedannu yochisuvavanu ninnola ginda horatiddaane.
Nahum 1:11 in English
- King James Version (KJV)
- There is [one] come out of thee, that imagineth evil against the LORD, a wicked counsellor.
- World English Bible (WEB)
- One has gone out of you who devises evil against the LORD, who counsels wickedness.
- American Standard Version (ASV)
- There is one gone forth out of thee, that deviseth evil against Jehovah, that counselleth wickedness.
- Bible in Basic English (BBE)
- One has gone out from you who is designing evil against the Lord, whose purposes are of no value.
- Darby Translation (DBY)
- Out of thee is gone forth one that imagineth evil against Jehovah, a wicked counsellor.
- Webster's Bible (WBS)
- There is [one] come out of thee, that imagineth evil against the LORD, a wicked counselor.
- Young's Literal Translation (YLT)
- From thee hath come forth a deviser of evil Against Jehovah — a worthless counsellor.
Read in context
- 9ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
- 10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
- 11ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
- 12ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
- 13ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
Cross references
- Nahum 1:9 ನಹೂಮ 1:9ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
- 2 Chronicles 13:7 2 ಪೂರ್ವಕಾಲವೃತ್ತಾಂತ 13:7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
- 2 Chronicles 32:15–19 2 ಪೂರ್ವಕಾಲವೃತ್ತಾಂತ 32:15–19ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ. ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು. ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು. ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು. ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
- 2 Kings 18:13–14 2 ಅರಸುಗಳು 18:13–14ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು. ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
- Isaiah 10:7–15 ಯೆಶಾಯ 10:7–15ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ. ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- 2 Kings 19:22–25 2 ಅರಸುಗಳು 19:22–25ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ. ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ. ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ. ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
- 2 Samuel 20:1 2 ಸಮುವೇಲನು 20:1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
- 1 Samuel 2:12 1 ಸಮುವೇಲನು 2:12ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
- 2 Kings 18:30 2 ಅರಸುಗಳು 18:30ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.