Nahum · chapter 1 · verse 2
Nahum 1:2 in Kannada
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
Kartanu roshavullantha, muyyigemuyyi koduvantha devaru; kartanu muyyige muyyi koduvantha ugravullaatanu, kartanu tanna vairi galige muyyigemuyyi teerisi tanna shatrugala mele kopavannu ittukolluttaane.
Nahum 1:2 in English
- King James Version (KJV)
- God [is] jealous, and the LORD revengeth; the LORD revengeth, and [is] furious; the LORD will take vengeance on his adversaries, and he reserveth [wrath] for his enemies.
- World English Bible (WEB)
- The LORD is a jealous God and avenges. The LORD avenges and is full of wrath. The LORD takes vengeance on his adversaries, and he maintains wrath against his enemies.
- American Standard Version (ASV)
- Jehovah is a jealous God and avengeth; Jehovah avengeth and is full of wrath; Jehovah taketh vengeance on his adversaries, and he reserveth [wrath] for his enemies.
- Bible in Basic English (BBE)
- The Lord is a God who takes care of his honour and gives punishment for wrong; the Lord gives punishment and is angry; the Lord sends punishment on those who are against him, being angry with his haters.
- Darby Translation (DBY)
- A jealous and avenging God is Jehovah: an avenger is Jehovah, and full of fury: Jehovah taketh vengeance on his adversaries, and he reserveth [wrath] for his enemies.
- Webster's Bible (WBS)
- God [is] jealous, and the LORD avengeth; the LORD avengeth, and [is] furious; the LORD will take vengeance on his adversaries, and he reserveth [wrath] for his enemies.
- Young's Literal Translation (YLT)
- A God zealous and avenging [is] Jehovah, An avenger [is] Jehovah, and possessing fury. An avenger [is] Jehovah on His adversaries, And He is watching for His enemies.
Read in context
- 1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
- 2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- 3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- 4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
Cross references
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Zechariah 8:2 ಜೆಕರ್ಯ 8:2ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು.
- Psalm 94:1 ಕೀರ್ತನೆಗಳು 94:1ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
- Exodus 34:14 ವಿಮೋಚನಕಾಂಡ 34:14ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
- Joshua 24:19 ಯೆಹೋಶುವ 24:19ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
- Isaiah 42:13 ಯೆಶಾಯ 42:13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
- Deuteronomy 4:24 ಧರ್ಮೋಪದೇಶಕಾಂಡ 4:24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
- Deuteronomy 32:41–43 ಧರ್ಮೋಪದೇಶಕಾಂಡ 32:41–43ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Ezekiel 39:25 ಯೆಹೆಜ್ಕೇಲನು 39:25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- Hebrews 10:30 ಇಬ್ರಿಯರಿಗೆ 10:30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- Joel 2:18 ಯೋವೇಲ 2:18ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.