Nahum · chapter 1 · verse 5
Nahum 1:5 in Kannada
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
Bettagalu aatana munde kampisuttave; guddagalu karaguttave; bhoomiyoo haudu, lokavoo adaralli vaasisu vavarellaroo aatana munde suttu hoguvaru.
Nahum 1:5 in English
- King James Version (KJV)
- The mountains quake at him, and the hills melt, and the earth is burned at his presence, yea, the world, and all that dwell therein.
- World English Bible (WEB)
- The mountains quake before him, and the hills melt away. The earth trembles at his presence, yes, the world, and all who dwell in it.
- American Standard Version (ASV)
- The mountains quake at him, and the hills melt; and the earth is upheaved at his presence, yea, the world, and all that dwell therein.
- Bible in Basic English (BBE)
- The mountains are shaking because of him, and the hills flowing away; the earth is falling to bits before him, the world and all who are in it.
- Darby Translation (DBY)
- The mountains quake before him, and the hills melt, and the earth is upheaved at his presence, and the world, and all that dwell therein.
- Webster's Bible (WBS)
- The mountains quake at him, and the hills melt, and the earth is burned at his presence, even the world, and all that dwell therein.
- Young's Literal Translation (YLT)
- Mountains have shaken because of Him, And the hills have been melted; And lifted up [is] the earth at His presence, And the world and all dwelling in it.
Read in context
- 3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- 4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
- 5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- 6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- 7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
Cross references
- Micah 1:4 ಮೀಕ 1:4ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- Jeremiah 4:24 ಯೆರೆಮೀಯ 4:24ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
- 2 Samuel 22:8 2 ಸಮುವೇಲನು 22:8ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
- Psalm 68:8 ಕೀರ್ತನೆಗಳು 68:8ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- Judges 5:5 ನ್ಯಾಯಸ್ಥಾಪಕರು 5:5ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
- Psalm 97:4–5 ಕೀರ್ತನೆಗಳು 97:4–5ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ. ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
- Habakkuk 3:10 ಹಬಕ್ಕೂಕ 3:10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- Isaiah 64:1–2 ಯೆಶಾಯ 64:1–2ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
- Psalm 114:6 ಕೀರ್ತನೆಗಳು 114:6ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
- Psalm 114:4 ಕೀರ್ತನೆಗಳು 114:4ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
- Psalm 98:7 ಕೀರ್ತನೆಗಳು 98:7ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.
- Psalm 46:6 ಕೀರ್ತನೆಗಳು 46:6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.