Nahum · chapter 1 · verse 7
Nahum 1:7 in Kannada
ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
Kartanu olleyavanu; ikkattina dinadalli balavaada koteyaagiddaane; tannalli nambikeyidu vavarannu ballanu.
Nahum 1:7 in English
- King James Version (KJV)
- The LORD [is] good, a strong hold in the day of trouble; and he knoweth them that trust in him.
- World English Bible (WEB)
- The LORD is good, a stronghold in the day of trouble; and he knows those who take refuge in him.
- American Standard Version (ASV)
- Jehovah is good, a stronghold in the day of trouble; and he knoweth them that take refuge in him.
- Bible in Basic English (BBE)
- The Lord is good, a strong place in the day of trouble; and he has knowledge of those who take him for their safe cover.
- Darby Translation (DBY)
- Jehovah is good, a stronghold in the day of trouble; and he knoweth them that trust in him.
- Webster's Bible (WBS)
- The LORD [is] good, a strong hold in the day of trouble; and he knoweth them that trust in him.
- Young's Literal Translation (YLT)
- Good [is] Jehovah for a strong place in a day of distress. And He knoweth those trusting in Him.
Read in context
- 5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- 6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- 7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- 8ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
- 9ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
Cross references
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- Lamentations 3:25 ಪ್ರಲಾಪಗಳು 3:25ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- Psalm 91:1–2 ಕೀರ್ತನೆಗಳು 91:1–2ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Psalm 18:1–2 ಕೀರ್ತನೆಗಳು 18:1–2ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ. ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.