Nehemiah · chapter 1 · verse 10
Nehemiah 1:10 in Kannada
ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
Ninna mahaa shaktiyindaloo balavaada kaiyindaloo neenu vimochisida ninna sevakaroo janaroo ivare.o kartane, ninna naamakke bhayapadalu ichchhisuva ninna sevakana praarthaneyannoo sevakara praarthaneyannoo ninna kivi aalaisuttaa irali; indu ninna sevakanige vruddhiyannu kottu ee manushyana drushtiyalli avanige karune dorakuva haage maadu. Yaakandare naanu arasanige paana koduvavanaagiddenu.
Nehemiah 1:10 in English
- King James Version (KJV)
- Now these [are] thy servants and thy people, whom thou hast redeemed by thy great power, and by thy strong hand.
- World English Bible (WEB)
- “Now these are your servants and your people, whom you have redeemed by your great power and by your strong hand.
- American Standard Version (ASV)
- Now these are thy servants and thy people, whom thou hast redeemed by thy great power, and by thy strong hand.
- Bible in Basic English (BBE)
- Now these are your servants and your people, whom you have made yours by your great power and by your strong hand.
- Darby Translation (DBY)
- And they are thy servants and thy people, whom thou hast redeemed by thy great power and by thy strong hand.
- Webster's Bible (WBS)
- Now these [are] thy servants and thy people, whom thou hast redeemed by thy great power, and by thy strong hand.
- Young's Literal Translation (YLT)
- And they [are] Thy servants, and Thy people, whom Thou hast ransomed by Thy great power, and by Thy strong hand.
Read in context
- 8ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
- 9ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
- 10ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- 11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
Cross references
- Deuteronomy 9:29 ಧರ್ಮೋಪದೇಶಕಾಂಡ 9:29ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- Daniel 9:15–27 ದಾನಿಯೇಲನು 9:15–27ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ. ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ. ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು. ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು. ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು. ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ. ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು. ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ. ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು. ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Exodus 32:11 ವಿಮೋಚನಕಾಂಡ 32:11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
- Psalm 74:2 ಕೀರ್ತನೆಗಳು 74:2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
- Psalm 136:12 ಕೀರ್ತನೆಗಳು 136:12ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
- Exodus 13:9 ವಿಮೋಚನಕಾಂಡ 13:9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Isaiah 63:16–19 ಯೆಶಾಯ 63:16–19ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ. ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು. ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ. ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
- Exodus 15:13 ವಿಮೋಚನಕಾಂಡ 15:13ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
- Exodus 6:1 ವಿಮೋಚನಕಾಂಡ 6:1ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
- Deuteronomy 15:15 ಧರ್ಮೋಪದೇಶಕಾಂಡ 15:15ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
- Isaiah 64:9 ಯೆಶಾಯ 64:9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.