Nehemiah · chapter 1 · verse 9
Nehemiah 1:9 in Kannada
ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
Aadare neevu nanna balige tirugi nanna aajnyegalannu kaikondu avugala prakaara maadidare nimmalliruvavaru aakaashada antyada varegoo horadisalpattiddaroo naanu allinda ava rannu koodisi nanna hesarannidalu aadukonda sthalakke avarannu baramaaduvenu endu helidi.
Nehemiah 1:9 in English
- King James Version (KJV)
- But [if] ye turn unto me, and keep my commandments, and do them; though there were of you cast out unto the uttermost part of the heaven, [yet] will I gather them from thence, and will bring them unto the place that I have chosen to set my name there.
- World English Bible (WEB)
- but if you return to me, and keep my commandments and do them, though your outcasts were in the uttermost part of the heavens, yet I will gather them from there, and will bring them to the place that I have chosen, to cause my name to dwell there.’
- American Standard Version (ASV)
- but if ye return unto me, and keep my commandments and do them, though your outcasts were in the uttermost part of the heavens, yet will I gather them from thence, and will bring them unto the place that I have chosen, to cause my name to dwell there.
- Bible in Basic English (BBE)
- But if you come back to me and keep my orders and do them, even if those of you who have been forced out are living in the farthest parts of heaven, I will get them from there, and take them back to the place marked out by me for the resting-place of my name.
- Darby Translation (DBY)
- but if ye return to me, and keep my commandments and do them, though there were of you cast out unto the uttermost part of the heavens, yet will I gather them from thence, and will bring them unto the place that I have chosen to set my name there.
- Webster's Bible (WBS)
- But [if] ye turn to me, and keep my commandments, and do them; though there were of you driven to the uttermost part of the heaven, [yet] will I gather them from thence, and will bring them to the place that I have chosen to set my name there.
- Young's Literal Translation (YLT)
- and ye have turned back unto Me, and kept My commands, and done them — if your outcast is in the end of the heavens, thence I gather them, and have brought them in unto the place that I have chosen to cause My name to tabernacle there.
Read in context
- 7ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.
- 8ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
- 9ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
- 10ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- 11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
Cross references
- Jeremiah 29:11–14 ಯೆರೆಮೀಯ 29:11–14ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ. ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Deuteronomy 30:2–5 ಧರ್ಮೋಪದೇಶಕಾಂಡ 30:2–5ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು. ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು.
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Jeremiah 32:37 ಯೆರೆಮೀಯ 32:37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
- Leviticus 26:39–42 ಯಾಜಕಕಾಂಡ 26:39–42ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
- Isaiah 56:8 ಯೆಶಾಯ 56:8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
- Ezra 6:12 ಎಜ್ರನು 6:12ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
- Jeremiah 12:15 ಯೆರೆಮೀಯ 12:15ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Psalm 147:2 ಕೀರ್ತನೆಗಳು 147:2ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
- Matthew 24:31 ಮತ್ತಾಯನು 24:31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- Jeremiah 31:10 ಯೆರೆಮೀಯ 31:10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
Original words (Hebrew)
- turn · H7725שׁוּב shûwb
- keep · H8104שָׁמַר shâmar
- commandments · H4687מִצְוָה mitsvâh
- do · H6213עָשָׂה ʻâsâh
- out · H5080נָדַח nâdach
- part · H7097קָצֶה qâtseh
- heaven · H8064שָׁמַיִם shâmayim
- gather · H6908קָבַץ qâbats
- bring · H935בּוֹא bôwʼ
- place · H4725מָקוֹם mâqôwm
- chosen · H977בָּחַר bâchar
- set · H7931שָׁכַן shâkan
- name · H8034שֵׁם shêm