Nehemiah · chapter 10 · verse 30
Nehemiah 10:30 in Kannada
ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ
Naavu namma kumaarteyarannu aa deshada janarige koduvadilla. Namma kumaararige avara kumaarteyarannu takkolluvadilla
Nehemiah 10:30 in English
- King James Version (KJV)
- And that we would not give our daughters unto the people of the land, nor take their daughters for our sons:
- World English Bible (WEB)
- and that we would not give our daughters to the peoples of the land, nor take their daughters for our sons;
- American Standard Version (ASV)
- and that we would not give our daughters unto the peoples of the land, nor take their daughters for our sons;
- Bible in Basic English (BBE)
- And that we would not give our daughters to the peoples of the lands, or take their daughters for our sons;
- Darby Translation (DBY)
- and that we would not give our daughters to the peoples of the land, nor take their daughters for our sons:
- Webster's Bible (WBS)
- And that we would not give our daughters to the people of the land, nor take their daughters for our sons:
- Young's Literal Translation (YLT)
- and that we give not our daughters to the peoples of the land, and their daughters we take not to our sons;
Read in context
- 28ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
- 29ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
- 30ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ
- 31ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.
- 32ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ
Cross references
- Deuteronomy 7:3 ಧರ್ಮೋಪದೇಶಕಾಂಡ 7:3ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
- Exodus 34:16 ವಿಮೋಚನಕಾಂಡ 34:16ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- Ezra 9:1–3 ಎಜ್ರನು 9:1–3ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ. ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು. ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
- Ezra 10:10–12 ಎಜ್ರನು 10:10–12ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ. ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು. ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು,
- Ezra 9:12–14 ಎಜ್ರನು 9:12–14ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು. ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.