Nehemiah · chapter 12 · verse 24
Nehemiah 12:24 in Kannada
ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
Leviyara mukhyastharaada hasha byanoo sherebyanoo kadmeeyelana maganaada yeshoovanoo avarigeduraagi ninta avara sahodararoo devara manushyanaada daaveedana aajnyeya prakaara hogaluvadakkoo stotramaadu vadakkoo varga vargagalaagiddaru.
Nehemiah 12:24 in English
- King James Version (KJV)
- And the chief of the Levites: Hashabiah, Sherebiah, and Jeshua the son of Kadmiel, with their brethren over against them, to praise [and] to give thanks, according to the commandment of David the man of God, ward over against ward.
- World English Bible (WEB)
- The chiefs of the Levites: Hashabiah, Sherebiah, and Jeshua the son of Kadmiel, with their brothers close to them, to praise and give thanks according to the commandment of David the man of God, section next to section.
- American Standard Version (ASV)
- And the chiefs of the Levites: Hashabiah, Sherebiah, and Jeshua the son of Kadmiel, with their brethren over against them, to praise and give thanks, according to the commandment of David the man of God, watch next to watch.
- Bible in Basic English (BBE)
- And the chiefs of the Levites: Hashabiah, Sherebiah, and Jeshua, the son of Kadmiel, with their brothers opposite them, to give blessing and praise as ordered by David, the man of God, watch against watch.
- Darby Translation (DBY)
- And the chief Levites: Hashabiah, Sherebiah, and Jeshua the son of Kadmiel, with their brethren over against them, to praise [and] to give thanks, according to the commandment of David the man of God, ward over against ward.
- Webster's Bible (WBS)
- And the chief of the Levites: Hashabiah, Sherebiah, and Jeshua the son of Kadmiel, with their brethren over against them, to praise [and] to give thanks according to the commandment of David the man of God, ward over against ward.
- Young's Literal Translation (YLT)
- and heads of the Levites: Hashabiah, Sherebiah, and Jeshua son of Kadmiel, and their brethren, [are] over-against them, to give praise, to give thanks, by command of David the man of God, charge over-against charge.
Read in context
- 22ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು.
- 23ಎಲ್ಯಾಷೀಬನ ಮಗನಾದ ಯೋಹಾ ನಾನನ ಕಾಲದ ವರೆಗೆ ಲೇವಿ ಎಂಬವನ ಮಕ್ಕಳಾದ ಪಿತೃಗಳ ಮುಖ್ಯಸ್ಥರು ವೃತಾಂತಗಳ ಪುಸ್ತಕದಲ್ಲಿ ಬರೆ ಯಲ್ಪಟ್ಟಿದ್ದರು.
- 24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
- 25ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.
- 26ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.
Cross references
- 1 Chronicles 25:1–26 1 ಪೂರ್ವಕಾಲವೃತ್ತಾಂತ 25:1–26ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ;
- Nehemiah 10:9–13 ನೆಹೆಮೀಯ 10:9–13ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್, ಕದ್ಮೀ ಯೇಲನು; ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು, ವಿಾಕನು, ರೆಹೋಬನು, ಹಷಬ್ಯನು, ಜಕ್ಕೂರನು, ಶೇರೇಬ್ಯನು, ಶೆಬನ್ಯನು, ಹೋದೀ ಯನು, ಬಾನೀಯು, ಬೆನೀನೂ.
- Ezra 3:10–11 ಎಜ್ರನು 3:10–11ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು. ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- Ezra 2:40 ಎಜ್ರನು 2:40ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.
- Nehemiah 9:4 ನೆಹೆಮೀಯ 9:4ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.
- 1 Chronicles 23:1–32 1 ಪೂರ್ವಕಾಲವೃತ್ತಾಂತ 23:1–32ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು. ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು. ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು. ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು. ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು. ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು. ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು -- ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು. ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು. ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು. ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು. ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು. ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು. ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು. ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು. ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು. ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು. ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು. ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು; ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು. ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ. ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು. ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು. ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು. ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು. ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು. ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- Nehemiah 11:17 ನೆಹೆಮೀಯ 11:17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
- 2 Chronicles 8:14 2 ಪೂರ್ವಕಾಲವೃತ್ತಾಂತ 8:14ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
- Joshua 14:6 ಯೆಹೋಶುವ 14:6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
- Nehemiah 12:8–9 ನೆಹೆಮೀಯ 12:8–9ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ. ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.
- 1 Kings 17:24 1 ಅರಸುಗಳು 17:24ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
Original words (Hebrew)
- chief · H7218רֹאשׁ rôʼsh
- Levites · H3881לֵוִיִּי Lêvîyîy
- Hashabiah · H2811חֲשַׁבְיָה Chăshabyâh
- Sherebiah · H8274שֵׁרֵבְיָה Shêrêbᵉyâh
- Jeshua · H3442יֵשׁוּעַ Yêshûwaʻ
- son · H1121בֵּן bên
- Kadmiel · H6934קַדְמִיאֵל Qadmîyʼêl
- brethren · H251אָח ʼâch
- praise · H1984הָלַל hâlal
- thanks · H3034יָדָה yâdâh
- commandment · H4687מִצְוָה mitsvâh
- David · H1732דָּוִד Dâvid
- man · H376אִישׁ ʼîysh
- God · H430אֱלֹהִים ʼĕlôhîym
- ward · H4929מִשְׁמָר mishmâr
- against · H5980עֻמָּה ʻummâh
- ward · H4929מִשְׁמָר mishmâr