Nehemiah · chapter 12 · verse 30
Nehemiah 12:30 in Kannada
ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.
Yaajakaroo leviyaroo tammannu shuddha maadikondu janarannoo baagalugalannoo gode yannoo shuddhamaadidaru.
Nehemiah 12:30 in English
- King James Version (KJV)
- And the priests and the Levites purified themselves, and purified the people, and the gates, and the wall.
- World English Bible (WEB)
- The priests and the Levites purified themselves; and they purified the people, the gates, and the wall.
- American Standard Version (ASV)
- And the priests and the Levites purified themselves; and they purified the people, and the gates, and the wall.
- Bible in Basic English (BBE)
- And the priests and the Levites made themselves clean; and they made the people clean, and the doorways and the wall.
- Darby Translation (DBY)
- And the priests and the Levites purified themselves; and they purified the people, and the gates and the wall.
- Webster's Bible (WBS)
- And the priests and the Levites purified themselves, and purified the people, and the gates, and the wall.
- Young's Literal Translation (YLT)
- and the priests and the Levites are cleansed, and they cleanse the people, and the gates, and the wall.
Read in context
- 28ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ
- 29ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.
- 30ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.
- 31ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
- 32ಅವರ ಹಿಂಭಾಗದಲ್ಲಿ ಹೋಷಾಯನೂ ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ
Cross references
- Ezra 6:21 ಎಜ್ರನು 6:21ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
- Job 1:5 ಯೋಬನು 1:5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- Exodus 19:10 ವಿಮೋಚನಕಾಂಡ 19:10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
- 2 Chronicles 29:5 2 ಪೂರ್ವಕಾಲವೃತ್ತಾಂತ 29:5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- Nehemiah 13:30 ನೆಹೆಮೀಯ 13:30ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
- Hebrews 5:1 ಇಬ್ರಿಯರಿಗೆ 5:1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
- Exodus 19:15 ವಿಮೋಚನಕಾಂಡ 19:15ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
- Genesis 35:2 ಆದಿಕಾಂಡ 35:2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
- 2 Chronicles 29:34 2 ಪೂರ್ವಕಾಲವೃತ್ತಾಂತ 29:34ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
- Hebrews 5:3 ಇಬ್ರಿಯರಿಗೆ 5:3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
- Nehemiah 13:22 ನೆಹೆಮೀಯ 13:22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- Numbers 19:2–20 ಅರಣ್ಯಕಾಂಡ 19:2–20ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು. ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು. ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು. ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು. ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು. ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು. ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು. ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು. ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು. ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ. ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು. ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು. ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು. ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು. ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು. ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.