Nehemiah · chapter 4 · verse 9
Nehemiah 4:9 in Kannada
ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.
Aadare naavu namma devarige praarthane maadi avara nimitta avarige eduraagi raatri hagalu kaavalannu ittevu.
Nehemiah 4:9 in English
- King James Version (KJV)
- Nevertheless we made our prayer unto our God, and set a watch against them day and night, because of them.
- World English Bible (WEB)
- But we made our prayer to our God, and set a watch against them day and night because of them.
- American Standard Version (ASV)
- But we made our prayer unto our God, and set a watch against them day and night, because of them.
- Bible in Basic English (BBE)
- But we made our prayer to God, and had men on watch against them day and night because of them.
- Darby Translation (DBY)
- Then we prayed to our God, and set a watch against them day and night, because of them.
- Webster's Bible (WBS)
- Nevertheless we made our prayer to our God, and set a watch against them day and night, because of them.
- Young's Literal Translation (YLT)
- And we pray unto our God, and appoint a watch against them, by day and by night, because of them.
Read in context
- 7ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
- 8ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
- 9ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.
- 10ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.
- 11ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
Cross references
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Acts 4:24–30 ಅಪೊಸ್ತಲರ ಕೃತ್ಯಗಳು 4:24–30ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ; ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು. ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- Matthew 26:41 ಮತ್ತಾಯನು 26:41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Luke 6:11–12 ಲೂಕನು 6:11–12ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- 2 Kings 19:14–19 2 ಅರಸುಗಳು 19:14–19ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು. ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ. ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು. ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ. ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು. ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- Nehemiah 4:11 ನೆಹೆಮೀಯ 4:11ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
- Psalm 55:16–22 ಕೀರ್ತನೆಗಳು 55:16–22ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು. ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು. ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ. ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ. ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ. ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Genesis 32:9–12 ಆದಿಕಾಂಡ 32:9–12ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ, ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು. ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ. ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.