Nehemiah · chapter 5 · verse 1
Nehemiah 5:1 in Kannada
ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
Aadare janarindaloo avara hendatiyarindaloo tamma sahodararaada yehoodyara mele dodda koogu untaayitu.
Nehemiah 5:1 in English
- King James Version (KJV)
- And there was a great cry of the people and of their wives against their brethren the Jews.
- World English Bible (WEB)
- Then there arose a great cry of the people and of their wives against their brothers the Jews.
- American Standard Version (ASV)
- Then there arose a great cry of the people and of their wives against their brethren the Jews.
- Bible in Basic English (BBE)
- Then there was a great outcry from the people and their wives against their countrymen the Jews.
- Darby Translation (DBY)
- And there was a great cry of the people and of their wives against their brethren the Jews.
- Webster's Bible (WBS)
- And there was a great cry of the people and of their wives against their brethren the Jews.
- Young's Literal Translation (YLT)
- And there is a great cry of the people and their wives, concerning their brethren the Jews,
Read in context
- 1ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
- 2ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
- 3ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು.
Cross references
- Isaiah 5:7 ಯೆಶಾಯ 5:7ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Deuteronomy 15:7–11 ಧರ್ಮೋಪದೇಶಕಾಂಡ 15:7–11ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ. ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು. ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ. ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು. ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- Exodus 22:25–27 ವಿಮೋಚನಕಾಂಡ 22:25–27ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ. ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- 1 Corinthians 6:6–8 1 ಕೊರಿಂಥದವರಿಗೆ 6:6–8ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ. ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು? ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
- Acts 7:26 ಅಪೊಸ್ತಲರ ಕೃತ್ಯಗಳು 7:26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
- Leviticus 25:35–37 ಯಾಜಕಕಾಂಡ 25:35–37ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು. ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು. ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Job 34:28 ಯೋಬನು 34:28ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
- Job 31:38–39 ಯೋಬನು 31:38–39ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ, ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.