Nehemiah · chapter 7 · verse 70
Nehemiah 7:70 in Kannada
ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.
Pitrugalalli mukhyaraada kelavaru kelasakke kaanikegalannu kottaru. Tirshatanu bokkasakke saavira bangaarada pavanugalannu aivattu paatre galannoo ainoora moovattu yaajakara angiga lannoo kottanu.
Nehemiah 7:70 in English
- King James Version (KJV)
- And some of the chief of the fathers gave unto the work. The Tirshatha gave to the treasure a thousand drams of gold, fifty basons, five hundred and thirty priests’ garments.
- World English Bible (WEB)
- Some from among the heads of fathers’ households gave to the work. The governor gave to the treasury one thousand darics of gold, fifty basins, and five hundred thirty priests’ garments.
- American Standard Version (ASV)
- And some from among the heads of fathers’ [houses] gave unto the work. The governor gave to the treasury a thousand darics of gold, fifty basins, five hundred and thirty priests’ garments.
- Bible in Basic English (BBE)
- And some of the heads of families gave money for the work. The Tirshatha gave into the store a thousand darics of gold, fifty basins, five hundred and thirty priests' robes.
- Darby Translation (DBY)
- And some of the chief fathers gave to the work. The Tirshatha gave to the treasure a thousand darics of gold, fifty basons, five hundred and thirty priests' coats.
- Webster's Bible (WBS)
- And some of the chief of the fathers gave to the work. The Tirshatha gave to the treasure a thousand drams of gold, fifty basins, five hundred and thirty priests' garments.
- Young's Literal Translation (YLT)
- And from the extremity of the heads of the fathers they have given to the work; the Tirshatha hath given to the treasure, of gold, drams a thousand, bowls fifty, priests' coats thirty and five hundred.
Read in context
- 68ಇವರ ಕುದುರೆ ಗಳು ಏಳು ನೂರಮೂವತ್ತಾರು, ಇವರ ಹೇಸರಕತ್ತೆಗಳು ಇನ್ನೂರ ನಾಲ್ವತ್ತೈದು;
- 69ಒಂಟೆಗಳು ನಾನೂರ ಮೂವತ್ತೈದು; ಕತ್ತೆಗಳು ಆರು ಸಾವಿರದ ಏಳು ನೂರ ಇಪ್ಪತ್ತು ಇದ್ದವು.
- 70ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.
- 71ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು.
- 72ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
Cross references
- Nehemiah 8:9 ನೆಹೆಮೀಯ 8:9ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
- Ezra 2:68–70 ಎಜ್ರನು 2:68–70ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು. ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು. ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- 2 Chronicles 4:8 2 ಪೂರ್ವಕಾಲವೃತ್ತಾಂತ 4:8ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
- 1 Kings 7:45 1 ಅರಸುಗಳು 7:45ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
- Numbers 7:2–86 ಅರಣ್ಯಕಾಂಡ 7:2–86ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು. ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು. ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು. ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು. ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು. ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು. ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು. ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು. ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು. ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು. ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು. ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು. ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು. ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ-- ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು. ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು. ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು. ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು. ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು. ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು. ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು. ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು. ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು. ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು. ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು. ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು. ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು. ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ. ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು. ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
- Nehemiah 7:65 ನೆಹೆಮೀಯ 7:65ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.
- 1 Chronicles 28:17 1 ಪೂರ್ವಕಾಲವೃತ್ತಾಂತ 28:17ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು.
- Exodus 24:6 ವಿಮೋಚನಕಾಂಡ 24:6ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
- Exodus 12:22 ವಿಮೋಚನಕಾಂಡ 12:22ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.
- Jeremiah 52:19 ಯೆರೆಮೀಯ 52:19ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
- 1 Chronicles 29:3–9 1 ಪೂರ್ವಕಾಲವೃತ್ತಾಂತ 29:3–9ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು. ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- 2 Chronicles 4:11 2 ಪೂರ್ವಕಾಲವೃತ್ತಾಂತ 4:11ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
Original words (Hebrew)
- of · H7117קְצָת qᵉtsâth
- chief · H7218רֹאשׁ rôʼsh
- fathers · H1אָב ʼâb
- gave · H5414נָתַן nâthan
- work · H4399מְלָאכָה mᵉlâʼkâh
- Tirshatha · H8660תִּרְשָׁתָא Tirshâthâʼ
- gave · H5414נָתַן nâthan
- treasure · H214אוֹצָר ʼôwtsâr
- thousand · H505אֶלֶף ʼeleph
- drams · H1871דַּרְכְּמוֹן darkᵉmôwn
- gold · H2091זָהָב zâhâb
- fifty · H2572חֲמִשִּׁים chămishshîym
- basons · H4219מִזְרָק mizrâq
- five · H2568חָמֵשׁ châmêsh
- hundred · H3967מֵאָה mêʼâh
- thirty · H7970שְׁלוֹשִׁים shᵉlôwshîym
- priests’ · H3548כֹּהֵן kôhên
- garments · H3801כְּתֹנֶת kᵉthôneth