Nehemiah · chapter 9 · verse 20
Nehemiah 9:20 in Kannada
ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
Idallade neenu avarige bodhi suva haage ninna olle aatmanannu kotti; avara baayige ninna mannavannu hindegeyalilla. Avara daahakke neerannu kotti.
Nehemiah 9:20 in English
- King James Version (KJV)
- Thou gavest also thy good spirit to instruct them, and withheldest not thy manna from their mouth, and gavest them water for their thirst.
- World English Bible (WEB)
- You gave also your good Spirit to instruct them, and didn’t withhold your manna from their mouth, and gave them water for their thirst.
- American Standard Version (ASV)
- Thou gavest also thy good Spirit to instruct them, and withheldest not thy manna from their mouth, and gavest them water for their thirst.
- Bible in Basic English (BBE)
- And you gave your good spirit to be their teacher, and did not keep back your manna from their mouths, and gave them water when they had need of it.
- Darby Translation (DBY)
- Thou gavest also thy good Spirit to instruct them, and withheldest not thy manna from their mouth, and gavest them water for their thirst.
- Webster's Bible (WBS)
- Thou gavest also thy good spirit to instruct them, and withheldest not thy manna from their mouth, and gavest them water for their thirst.
- Young's Literal Translation (YLT)
- 'And Thy good Spirit Thou hast given, to cause them to act wisely; and Thy manna Thou hast not withheld from their mouth, and water Thou hast given to them for their thirst,
Read in context
- 18ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ
- 19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
- 20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
- 21ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
- 22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
Cross references
- Psalm 143:10 ಕೀರ್ತನೆಗಳು 143:10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- Numbers 11:17 ಅರಣ್ಯಕಾಂಡ 11:17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
- Isaiah 63:11–14 ಯೆಶಾಯ 63:11–14ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- John 4:10 ಯೋಹಾನನು 4:10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
- Isaiah 48:21 ಯೆಶಾಯ 48:21ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
- Isaiah 41:17–18 ಯೆಶಾಯ 41:17–18ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು. ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
- Exodus 16:15 ವಿಮೋಚನಕಾಂಡ 16:15ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
- Ephesians 5:9 ಎಫೆಸದವರಿಗೆ 5:9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- John 7:37–39 ಯೋಹಾನನು 7:37–39ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Exodus 17:6 ವಿಮೋಚನಕಾಂಡ 17:6ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- Joshua 5:12 ಯೆಹೋಶುವ 5:12ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.