Nehemiah · chapter 9 · verse 22
Nehemiah 9:22 in Kannada
ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
Idallade neenu avarige raajyagalannoo janaangagalannoo oppisikottu avarige meregalannu vibhaagisikotti. Heegeye avaru seehonana deshavannoo heshbonina arasana deshavannoo baashaa nina arasanaada ogana deshavannu svaadheenamaadi kondaru.
Nehemiah 9:22 in English
- King James Version (KJV)
- Moreover thou gavest them kingdoms and nations, and didst divide them into corners: so they possessed the land of Sihon, and the land of the king of Heshbon, and the land of Og king of Bashan.
- World English Bible (WEB)
- Moreover you gave them kingdoms and peoples, which you allotted according to their portions. So they possessed the land of Sihon, even the land of the king of Heshbon, and the land of Og king of Bashan.
- American Standard Version (ASV)
- Moreover thou gavest them kingdoms and peoples, which thou didst allot after their portions: so they possessed the land of Sihon, even the land of the king of Heshbon, and the land of Og king of Bashan.
- Bible in Basic English (BBE)
- And you gave them kingdoms and peoples, making distribution to them in every part of the land: so they took for their heritage the land of Sihon, even the land of the king of Heshbon, and the land of Og, king of Bashan.
- Darby Translation (DBY)
- And thou gavest them kingdoms and peoples, and didst divide them by countries; and they possessed the land of Sihon, as well the land of the king of Heshbon, as the land of Og king of Bashan.
- Webster's Bible (WBS)
- Moreover, thou gavest them kingdoms and nations, and didst divide them into corners: so they possessed the land of Sihon, and the land of the king of Heshbon, and the land of Og king of Bashan.
- Young's Literal Translation (YLT)
- 'And Thou givest to them kingdoms, and peoples, and dost apportion them to the corner, and they possess the land of Sihon, and the land of the king of Heshbon, and the land of Og king of Bashan.
Read in context
- 20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
- 21ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
- 22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- 23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
- 24ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.
Cross references
- Numbers 21:21–35 ಅರಣ್ಯಕಾಂಡ 21:21–35ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ-- ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Psalm 105:44 ಕೀರ್ತನೆಗಳು 105:44ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Psalm 136:17–22 ಕೀರ್ತನೆಗಳು 136:17–22ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.
- Deuteronomy 32:26 ಧರ್ಮೋಪದೇಶಕಾಂಡ 32:26ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- Joshua 11:23 ಯೆಹೋಶುವ 11:23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- Joshua 10:11 ಯೆಹೋಶುವ 10:11ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
- Psalm 78:65 ಕೀರ್ತನೆಗಳು 78:65ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
- Deuteronomy 2:26–36 ಧರ್ಮೋಪದೇಶಕಾಂಡ 2:26–36ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ-- ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ. ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ; ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು. ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ. ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು. ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Psalm 135:10–12 ಕೀರ್ತನೆಗಳು 135:10–12ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು. ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು. ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
- Deuteronomy 3:1–17 ಧರ್ಮೋಪದೇಶಕಾಂಡ 3:1–17ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು. ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು. ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು. ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು. ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು. ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು. ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು. ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.) ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು, ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
Original words (Hebrew)
- gavest · H5414נָתַן nâthan
- kingdoms · H4467מַמְלָכָה mamlâkâh
- nations · H5971עַם ʻam
- divide · H2505חָלַק châlaq
- corners · H6285פֵּאָה pêʼâh
- possessed · H3423יָרַשׁ yârash
- land · H776אֶרֶץ ʼerets
- Sihon · H5511סִיחוֹן Çîychôwn
- land · H776אֶרֶץ ʼerets
- king · H4428מֶלֶךְ melek
- Heshbon · H2809חֶשְׁבּוֹן Cheshbôwn
- land · H776אֶרֶץ ʼerets
- Og · H5747עוֹג ʻÔwg
- king · H4428מֶלֶךְ melek
- Bashan · H1316בָּשָׁן Bâshân