Nehemiah · chapter 9 · verse 23
Nehemiah 9:23 in Kannada
ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
Idallade avara makkalannu aakaashada nakshatragala haage hechchisi avaru svaadheenamaadikollalu hoguvarendu neenu avara pitruga lige vaagdaanamaadida deshadalli avarannu baramaadidi;
Nehemiah 9:23 in English
- King James Version (KJV)
- Their children also multipliedst thou as the stars of heaven, and broughtest them into the land, concerning which thou hadst promised to their fathers, that they should go in to possess [it].
- World English Bible (WEB)
- You also multiplied their children as the stars of the sky, and brought them into the land concerning which you said to their fathers that they should go in to possess it.
- American Standard Version (ASV)
- Their children also multipliedst thou as the stars of heaven, and broughtest them into the land concerning which thou didst say to their fathers, that they should go in to possess it.
- Bible in Basic English (BBE)
- And you made their children as great in number as the stars of heaven, and took them into the land, of which you had said to their fathers that they were to go in and take it for themselves.
- Darby Translation (DBY)
- And their children thou didst multiply as the stars of heaven, and thou broughtest them into the land concerning which thou didst say to their fathers that they should go in to possess it.
- Webster's Bible (WBS)
- Their children also multipliedst thou as the stars of heaven, and broughtest them into the land, concerning which thou hadst promised to their fathers, that they should go in to possess [it] .
- Young's Literal Translation (YLT)
- And their sons Thou hast multiplied as the stars of the heavens, and bringest them in unto the land that Thou hast said to their fathers to go in to possess.
Read in context
- 21ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
- 22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- 23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
- 24ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.
- 25ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
Cross references
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Joshua 1:1–3 ಯೆಹೋಶುವ 1:1–3ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ-- ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು. ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Genesis 13:15–17 ಆದಿಕಾಂಡ 13:15–17ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು. ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- 1 Chronicles 27:23 1 ಪೂರ್ವಕಾಲವೃತ್ತಾಂತ 27:23ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.