Nehemiah · chapter 9 · verse 27
Nehemiah 9:27 in Kannada
ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
Aadadarinda neenu baadhisuva virodhigala kaiyalli avarannu oppisidi. Aadare tamma ikkattina kaaladalli avaru ninnannu koogidaaga neenu paralokadinda keli, ninna adhikavaada karuneya prakaara avara vairigala kaiyinda rakshisuvadakke, rakshakarannu avarige kotti.
Nehemiah 9:27 in English
- King James Version (KJV)
- Therefore thou deliveredst them into the hand of their enemies, who vexed them: and in the time of their trouble, when they cried unto thee, thou heardest [them] from heaven; and according to thy manifold mercies thou gavest them saviours, who saved them out of the hand of their enemies.
- World English Bible (WEB)
- Therefore you delivered them into the hand of their adversaries, who distressed them. In the time of their trouble, when they cried to you, you heard from heaven; and according to your manifold mercies you gave them saviors who saved them out of the hands of their adversaries.
- American Standard Version (ASV)
- Therefore thou deliveredst them into the hand of their adversaries, who distressed them: and in the time of their trouble, when they cried unto thee, thou heardest from heaven; and according to thy manifold mercies thou gavest them saviours who saved them out of the hand of their adversaries.
- Bible in Basic English (BBE)
- And so you gave them up into the hands of their haters who were cruel to them: and in the time of their trouble, when they made their prayer to you, you gave ear to them from heaven; and in your great mercy gave them saviours, who made them free from the hands of their haters.
- Darby Translation (DBY)
- And thou gavest them into the hand of their oppressors, and they oppressed them; and in the time of their distress, when they cried unto thee, thou heardest them from the heavens, and according to thy manifold mercies thou gavest them saviours, who saved them out of the hand of their oppressors.
- Webster's Bible (WBS)
- Therefore thou deliveredst them into the hand of their enemies, who distressed them: and in the time of their trouble, when they cried to thee, thou hearedest [them] from heaven; and according to thy manifold mercies thou gavest them deliverers, who saved them out of the hand of their enemies.
- Young's Literal Translation (YLT)
- and Thou givest them into the hand of their adversaries, and they distress them, and in the time of their distress they cry unto Thee, and Thou, from the heavens, dost hear, and, according to Thine abundant mercies, dost give to them saviours, and they save them out of the hand of their adversaries.
Read in context
- 25ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
- 26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- 27ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
- 28ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
- 29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
Cross references
- Psalm 106:41–45 ಕೀರ್ತನೆಗಳು 106:41–45ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು. ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು. ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- 2 Kings 13:5 2 ಅರಸುಗಳು 13:5ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
- 2 Kings 14:27 2 ಅರಸುಗಳು 14:27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
- Daniel 9:10–14 ದಾನಿಯೇಲನು 9:10–14ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Judges 2:14–16 ನ್ಯಾಯಸ್ಥಾಪಕರು 2:14–16ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು. ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು. ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Judges 6:6–10 ನ್ಯಾಯಸ್ಥಾಪಕರು 6:6–10ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು. ಇಸ್ರಾಯೇಲ್ಯರು ಮಿದ್ಯಾನ್ಯರ ನಿಮಿತ್ತ ಕರ್ತನಿಗೆ ಕೂಗಿದಾಗ ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು. ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು. ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
- Judges 2:18 ನ್ಯಾಯಸ್ಥಾಪಕರು 2:18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- Judges 10:15–16 ನ್ಯಾಯಸ್ಥಾಪಕರು 10:15–16ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
- 1 Samuel 12:10–11 1 ಸಮುವೇಲನು 12:10–11ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು. ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
- 2 Chronicles 36:17 2 ಪೂರ್ವಕಾಲವೃತ್ತಾಂತ 36:17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- Deuteronomy 31:16–18 ಧರ್ಮೋಪದೇಶಕಾಂಡ 31:16–18ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
Original words (Hebrew)
- deliveredst · H5414נָתַן nâthan
- hand · H3027יָד yâd
- enemies · H6862צַר tsar
- vexed · H6887צָרַר tsârar
- time · H6256עֵת ʻêth
- trouble · H6869צָרָה tsârâh
- cried · H6817צָעַק tsâʻaq
- heardest · H8085שָׁמַע shâmaʻ
- heaven · H8064שָׁמַיִם shâmayim
- manifold · H7227רַב rab
- mercies · H7356רַחַם racham
- gavest · H5414נָתַן nâthan
- saviours · H3467יָשַׁע yâshaʻ
- saved · H3467יָשַׁע yâshaʻ
- hand · H3027יָד yâd
- enemies · H6862צַר tsar