Nehemiah · chapter 9 · verse 30
Nehemiah 9:30 in Kannada
ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
Neenu aneka varusha avarannu taalikondiddu ninna pravaadigala mukhaantara ninna aatmaninda avarige virodhavaagi saakshihelidi. Aadare avaru kivigodade iddaddarinda neenu avarannu deshagala janara kaiyalli oppisidi.
Nehemiah 9:30 in English
- King James Version (KJV)
- Yet many years didst thou forbear them, and testifiedst against them by thy spirit in thy prophets: yet would they not give ear: therefore gavest thou them into the hand of the people of the lands.
- World English Bible (WEB)
- Yet many years you put up with them, and testified against them by your Spirit through your prophets. Yet they would not listen. Therefore you gave them into the hand of the peoples of the lands.
- American Standard Version (ASV)
- Yet many years didst thou bear with them, and testifiedst against them by thy Spirit through thy prophets: yet would they not give ear: therefore gavest thou them into the hand of the peoples of the lands.
- Bible in Basic English (BBE)
- Year after year you put up with them, and gave witness against them by your spirit through your prophets: still they did not give ear: and so you gave them up into the hands of the peoples of the lands.
- Darby Translation (DBY)
- And many years didst thou forbear with them, and testifiedst against them by thy Spirit through thy prophets; but they would not give ear: and thou gavest them into the hand of the peoples of the lands.
- Webster's Bible (WBS)
- Yet many years didst thou forbear over them, and testifiedst against them by thy spirit in thy prophets: yet would they not give ear: therefore thou gavest them into the hand of the people of the lands.
- Young's Literal Translation (YLT)
- 'And Thou drawest over them many years, and testifiest against them by Thy Spirit, by the hand of Thy prophets, and they have not given ear, and Thou dost give them into the hand of peoples of the lands,
Read in context
- 28ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
- 29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- 30ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- 31ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
- 32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
Cross references
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- 2 Kings 17:13–18 2 ಅರಸುಗಳು 17:13–18ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Isaiah 42:24 ಯೆಶಾಯ 42:24ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- Jeremiah 25:4 ಯೆರೆಮೀಯ 25:4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Zechariah 7:13 ಜೆಕರ್ಯ 7:13ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- 1 Peter 1:11 1 ಪೇತ್ರನು 1:11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Isaiah 5:5–6 ಯೆಶಾಯ 5:5–6ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.