Nehemiah · chapter 9 · verse 33
Nehemiah 9:33 in Kannada
ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
Aadare neenu namma mele baramaadida ellaadaralli neetiparanaagiddi. Yaakandare neenu maadiddu satyavaadaddu; aadare naavu dushtaraagi nadedevu.
Nehemiah 9:33 in English
- King James Version (KJV)
- Howbeit thou [art] just in all that is brought upon us; for thou hast done right, but we have done wickedly:
- World English Bible (WEB)
- However you are just in all that has come on us; for you have dealt truly, but we have done wickedly.
- American Standard Version (ASV)
- Howbeit thou art just in all that is come upon us; for thou hast dealt truly, but we have done wickedly;
- Bible in Basic English (BBE)
- But still, you have been in the right in everything which has come on us; you have been true to us, but we have done evil:
- Darby Translation (DBY)
- But thou art just in all that is come upon us; for thou hast acted according to truth, and we have done wickedly.
- Webster's Bible (WBS)
- But thou [art] just in all that is brought upon us; for thou hast done right, but we have done wickedly:
- Young's Literal Translation (YLT)
- and Thou [art] righteous concerning all that hath come upon us, for truth Thou hast done, and we have done wickedly;
Read in context
- 31ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
- 32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- 33ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
- 34ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
- 35ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
Cross references
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Psalm 106:6 ಕೀರ್ತನೆಗಳು 106:6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
- Daniel 9:5–14 ದಾನಿಯೇಲನು 9:5–14ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Job 34:23 ಯೋಬನು 34:23ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ.
- Psalm 119:137 ಕೀರ್ತನೆಗಳು 119:137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
- Lamentations 1:18 ಪ್ರಲಾಪಗಳು 1:18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
- Psalm 145:17 ಕೀರ್ತನೆಗಳು 145:17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
- Leviticus 26:40–41 ಯಾಜಕಕಾಂಡ 26:40–41ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
- Jeremiah 12:1 ಯೆರೆಮೀಯ 12:1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
- Job 33:27 ಯೋಬನು 33:27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;