Numbers · chapter 1 · verse 16
Numbers 1:16 in Kannada
ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
Sabheyavaralli prasiddhavaadavaroo tamma tandegala gotragala prabhugaloo israayelinalli sahasragala mukhya stharoo ivare.
Numbers 1:16 in English
- King James Version (KJV)
- These [ were] the renowned of the congregation, princes of the tribes of their fathers, heads of thousands in Israel.
- World English Bible (WEB)
- These are those who were called of the congregation, the princes of the tribes of their fathers; they were the heads of the thousands of Israel.
- American Standard Version (ASV)
- These are they that were called of the congregation, the princes of the tribes of their fathers; they were the heads of the thousands of Israel.
- Bible in Basic English (BBE)
- These are the men named out of all the people, chiefs of their fathers' houses, heads of the tribes of Israel.
- Darby Translation (DBY)
- These were those summoned of the assembly, princes of the tribes of their fathers, the heads of the thousands of Israel.
- Webster's Bible (WBS)
- These [were] the renowned of the congregation, princes of the tribes of their fathers, heads of thousands in Israel.
- Young's Literal Translation (YLT)
- These [are] those called of the company, princes of the tribes of their fathers; they [are] heads of the thousands of Israel.
Read in context
- 14ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್.
- 15ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
- 16ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
- 17ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.
- 18ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
Cross references
- Numbers 7:2 ಅರಣ್ಯಕಾಂಡ 7:2ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.
- Exodus 18:25 ವಿಮೋಚನಕಾಂಡ 18:25ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- Numbers 26:9 ಅರಣ್ಯಕಾಂಡ 26:9ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
- Numbers 16:2 ಅರಣ್ಯಕಾಂಡ 16:2ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು.
- Numbers 1:4 ಅರಣ್ಯಕಾಂಡ 1:4ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.
- 1 Chronicles 27:16–22 1 ಪೂರ್ವಕಾಲವೃತ್ತಾಂತ 27:16–22ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು. ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು; ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು; ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು; ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು. ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು. ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Numbers 7:10–83 ಅರಣ್ಯಕಾಂಡ 7:10–83ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು. ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು. ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು. ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು. ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು. ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು. ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ-- ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು. ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು. ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು. ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು. ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು. ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು. ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು. ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು. ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು. ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು. ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು. ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು. ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
- Numbers 10:14–27 ಅರಣ್ಯಕಾಂಡ 10:14–27ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು. ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು. ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು. ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು. ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು. ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು. ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು. ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು. ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು. ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು. ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು. ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು. ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು. ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
- Numbers 2:3–31 ಅರಣ್ಯಕಾಂಡ 2:3–31ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು. ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು. ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು. ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು. ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು. ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು. ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು. ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು. ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು. ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು. ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು. ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು. ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು. ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು. ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
- Deuteronomy 1:15 ಧರ್ಮೋಪದೇಶಕಾಂಡ 1:15ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ