Numbers · chapter 1 · verse 2
Numbers 1:2 in Kannada
ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
Israayel makkala samasta sabheya lekkavannu avara kutumbagala prakaaravaagiyoo avara tandegala manegala prakaara vaagiyoo gandasarellara hesarugala enikeyondige tale talegoo neevu takkolliri.
Numbers 1:2 in English
- King James Version (KJV)
- Take ye the sum of all the congregation of the children of Israel, after their families, by the house of their fathers, with the number of [their] names, every male by their polls;
- World English Bible (WEB)
- “Take a census of all the congregation of the children of Israel, by their families, by their fathers’ houses, according to the number of the names, every male, one by one,
- American Standard Version (ASV)
- Take ye the sum of all the congregation of the children of Israel, by their families, by their fathers’ houses, according to the number of the names, every male, by their polls;
- Bible in Basic English (BBE)
- Take the full number of the children of Israel, by their families, and by their fathers' houses, every male by name;
- Darby Translation (DBY)
- Take the sum of the whole assembly of the children of Israel, after their families, according to their fathers' houses, by the number of the names, every male, according to their polls;
- Webster's Bible (WBS)
- Take ye the sum of all the congregation of the children of Israel, after their families by the house of their fathers, with the number of [their] names, every male by their poll:
- Young's Literal Translation (YLT)
- 'Take ye up the sum of all the company of the sons of Israel by their families, by the house of their fathers, in the number of names — every male by their polls;
Read in context
- 1ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
- 2ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
- 3ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
- 4ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.
Cross references
- Exodus 30:12 ವಿಮೋಚನಕಾಂಡ 30:12ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
- Exodus 38:26 ವಿಮೋಚನಕಾಂಡ 38:26ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
- Numbers 1:18 ಅರಣ್ಯಕಾಂಡ 1:18ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
- Numbers 1:22 ಅರಣ್ಯಕಾಂಡ 1:22ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
- Numbers 26:2–4 ಅರಣ್ಯಕಾಂಡ 26:2–4ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು. ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.
- 1 Chronicles 27:23–24 1 ಪೂರ್ವಕಾಲವೃತ್ತಾಂತ 27:23–24ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು. ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
- 2 Samuel 24:1–3 2 ಸಮುವೇಲನು 24:1–3ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು. ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು. ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
- 1 Chronicles 21:1–2 1 ಪೂರ್ವಕಾಲವೃತ್ತಾಂತ 21:1–2ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು. ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
- Exodus 1:1–5 ವಿಮೋಚನಕಾಂಡ 1:1–5ಯಾಕೋಬನ ಜೊತೆಗೆ ಐಗುಪ್ತಕ್ಕೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲ್ ಮಕ್ಕಳ ಹೆಸರುಗಳು ಇವೇ: ರೂಬೇನ್ ಸಿಮೆಯೋನ್ ಲೇವಿ ಯೆಹೂದ ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್ ದಾನ್ ನಫ್ತಾಲಿ ಗಾದ್ ಆಶೇರ್. ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
- Numbers 26:63–64 ಅರಣ್ಯಕಾಂಡ 26:63–64ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು. ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Genesis 49:1–3 ಆದಿಕಾಂಡ 49:1–3ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ. ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ. ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
- Numbers 1:26–54 ಅರಣ್ಯಕಾಂಡ 1:26–54ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು. ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು. ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು. ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಎಫ್ರಾಯಾಮ್ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು. ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು. ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು. ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು. ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು. ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು. ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು. ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು. ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ. ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ-- ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ. ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು. ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು. ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು. ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
Original words (Hebrew)
- Take · H5375נָשָׂא nâsâʼ
- sum · H7218רֹאשׁ rôʼsh
- congregation · H5712עֵדָה ʻêdâh
- children · H1121בֵּן bên
- Israel · H3478יִשְׂרָאֵל Yisrâʼêl
- families · H4940מִשְׁפָּחָה mishpâchâh
- house · H1004בַּיִת bayith
- fathers · H1אָב ʼâb
- number · H4557מִסְפָּר miçpâr
- names · H8034שֵׁם shêm
- male · H2145זָכָר zâkâr
- polls · H1538גֻּלְגֹּלֶת gulgôleth